ನ್ಯೂಸ್ ನಾಟೌಟ್ :ಕಳೆದ ಒಂದು ವಾರದ ಹಿಂದೆ ಸುಳ್ಯ ಜಯನಗರದ ಸಂದೀಪ್ (21 ವರ್ಷ) ಎಂಬವರು ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು,ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಇವರು ಶ್ರೀಮತಿ ಕುಸುಮಾರವರ ಪುತ್ರ.ಒಂದು ವಾರದ ಹಿಂದೆ ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಕೂಡಲೇ ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಒಂದು ವಾರಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.