ನ್ಯೂಸ್ನಾಟೌಟ್: ಕಾನೂನುಬಾಹಿರ ಚಟುವಟಿಕೆಗಳು ನಡೆಯುತ್ತಿವೆ ಎಂಬ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ತಾಲೂಕಿನ ಉಜಿರೆಯ ಕೆಲವು ವಸತಿಗೃಹಗಳ ಮೇಲೆ ಸೋಮವಾರ ರಾತ್ರಿ ದಿಢೀರ್ ಪೊಲೀಸ್ ದಾಳಿಯಾಗಿದೆ.
ಪೊಲೀಸ್ ವರಿಷ್ಠಾಧಿಕಾರಿ ಅಮಟೆ ವಿಕ್ರಮ್ ಮಾರ್ಗದರ್ಶನದಲ್ಲಿ ಬಂಟ್ವಾಳ ಪೊಲೀಸ್ ಉಪವಿಭಾಗದ ಡಿವೈಎಸ್ಪಿ ಪ್ರತಾಪ್ ಸಿಂಗ್ ಥೋರಾಟ್ ನೇತೃತ್ವದ ವಿಶೇಷ ತಂಡ ಉಜಿರೆಯ ಹಲವು ವಸತಿಗೃಹಗಳ ಮೇಲೆ ದಾಳಿ ನಡೆಸಿ ರಿಜಿಸ್ಟರ್ ಮತ್ತು ಕಡತಗಳಲ್ಲಿ ನಮೂದಿಸಿರುವ ದಾಖಲೆ, ಗುರುತಿನ ಚೀಟಿ ವಿವರಗಳನ್ನು ಪರಿಶೀಲಿಸಿ ವಸತಿಗೃಹಗಳಲ್ಲಿ ಯಾವುದೇ ಕಾನೂನುಬಾಹಿರ ಚಟುವಟಿಕೆಗೆ ಆಸ್ಪದ ನೀಡದಂತೆ ಎಚ್ಚರಿಕೆ ನೀಡಿದ್ದಾರೆ. ವಸತಿಗೃಹಗಳಲ್ಲಿ ತಂಗುವವರು ಸಂಪೂರ್ಣ ಮಾಹಿತಿ ಪಡೆದು ರೂಮ್ ನೀಡಬೇಕು. ಶಂಕಾಸ್ಪದ ವ್ಯಕ್ತಿಗಳು ಕಂಡು ಬಂದರೆ ತಕ್ಷಣ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ.
ಬಂಟ್ವಾಳ ಪೊಲೀಸ್ ಉಪವಿಭಾಗದ ಅಧಿಕಾರಿಗಳು, ಸಿಬ್ಬಂದಿ ಕಾರ್ಯಾಚರಣೆಯಲ್ಲಿದ್ದರು.