ನ್ಯೂಸ್ ನಾಟೌಟ್: ದಿಢೀರ್ ಅನಾರೋಗ್ಯ ಹಿನ್ನೆಲೆಯಲ್ಲಿ ಕೇರಳದ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಅವರನ್ನು ಸೋಮವಾರ ರಾತ್ರಿ ನೆಯ್ಯಟ್ಟಿಂಕರ ನಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ತಂದೆಗೆ ನ್ಯುಮೋನಿಯಾ ಕಾಣಿಸಿಕೊಂಡಿದ್ದು, ತೀವ್ರ ಜ್ವರದ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರ ಪುತ್ರ ಫೇಸ್ಬುಕ್ ಪೋಸ್ಟ್ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಇದಕ್ಕೂ ಮೊದಲಿಗೆ ಉಮ್ಮನ್ ಚಾಂಡಿ ಅವರಿಗೆ ಸರಿಯಾದ ಚಿಕಿತ್ಸೆ ನೀಡಲಾಗುತ್ತಿಲ್ಲ ಎಂದು ಅವರ ಸಂಬಂಧಿಕರು ಆರೋಪಿಸಿದ್ದರು. ಸಾಮಾಜಿಕ ಮಾಧ್ಯಮದಲ್ಲಿ ಅವರ ಆರೋಗ್ಯದ ಬಗ್ಗೆ ವರದಿಗಳು ಕೇಳಿಬರುತ್ತಿದ್ದಂತೆ ಚಾಂಡಿ ಅವರು ತಮ್ಮ ಮಗನ ಫೇಸ್ಬುಕ್ ಪುಟದಲ್ಲಿ ವಿಡಿಯೋವನ್ನು ಪೋಸ್ಟ್ ಮಾಡಿ ಕುಟುಂಬ ಮತ್ತು ಪಕ್ಷ ತನ್ನನ್ನು ಸರಿಯಾಗಿ ನೋಡಿಕೊಳ್ಳುತ್ತಿದೆ ಎಂದು ಹೇಳಿಕೊಂಡಿದ್ದಾರೆ.