ಮಡಿಕೇರಿ: ಕೊಡಗು ವೈದ್ಯಕೀಯ ಕಾಲೇಜಿನ ಸುಮಾರು 34 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಕಾಲೇಜು ಕ್ಯಾಂಪಸ್ ನಲ್ಲಿ ವಿದ್ಯಾರ್ಥಿಗಳನ್ನು ಐಸೋಲೇಷನ್ ಮಾಡಲಾಗಿದ್ದು, ಆನ್ ಲೈನ್ ಮೂಲಕ ತರಗತಿಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಪ್ರಾಥಮಿಕ ಸಂಪರ್ಕಿತ ಎಲ್ಲಾ ವಿದ್ಯಾರ್ಥಿಗಳನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿದೆ. ಈ ಬಗ್ಗೆ ಕಾಲೇಜಿನ ಡೀನ್ ಡಾ.ಕಾರ್ಯಪ್ಪ ಪ್ರತಿಕ್ರಿಯೆ ನೀಡಿದ್ದು, ಕಳೆದ ವಾರದ ಹಿಂದೆ ಇಬ್ಬರು ವಿದ್ಯಾರ್ಥಿಗಳಿಗೆ ಸೋಂಕು ದೃಢಪಟ್ಟಿತ್ತು. ಆದಕಾರಣ ಎಲ್ಲಾ ವಿದ್ಯಾರ್ಥಿಗಳಿಗೆ ಸಾಮೂಹಿಕವಾಗಿ ತಪಾಸಣೆ ನಡೆಸಲಾಗಿದೆ. ಈ ಸಂದರ್ಭದಲ್ಲಿ 34 ವಿದ್ಯಾರ್ಥಿಗಳಲ್ಲಿ ಸೋಂಕು ಕಂಡುಬಂದಿದೆ ಎಂದಿದ್ದಾರೆ.
ಸೋಂಕಿತರಿಗೆ ಕಾಲೇಜಿನಲ್ಲಿಯೇ ಐಸೋಲೇಷನ್ ವ್ಯವಸ್ಥೆ ಮಾಡಲಾಗಿದೆ. ವಿದ್ಯಾರ್ಥಿಗಳಿಗೆ ಸದ್ಯಕ್ಕೆ ಆನ್ ಲೈನ್ ಮೂಲಕ ತರಗತಿ ತೆಗೆದುಕೊಳ್ಳಲಾಗುತ್ತಿದೆ. ವಿದ್ಯಾರ್ಥಿಗಳೆಲ್ಲರೂ ಆರೋಗ್ಯವಾಗಿದ್ದಾರೆ. ಯಾರೂ ಆತಂಕಕ್ಕೆ ಒಳಗಾಗಬೇಕಿಲ್ಲ ಎಂದು ಹೇಳಿದ್ದಾರೆ.