ನ್ಯೂಸ್ ನಾಟೌಟ್: ಸುಳ್ಯದ ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನ. 25ರಂದು ಆಯುರ್ವೇದ ರಥವನ್ನು ಅದ್ಧೂರಿಯಾಗಿ ಸ್ವಾಗತಿಸಲಾಯಿತು. ಬೆಂಗಳೂರಿನ ಪ್ಯಾಲೇಸ್ ಗ್ರೌಂಡಿನಲ್ಲಿ ಡಿ. 25ರಿಂದ ನಡೆಯಲಿರುವ 4 ದಿನದ ಎರಡನೇ ವಿಶ್ವ ಆಯುರ್ವೇದ ಸಮ್ಮಿಲನದ ಅಂಗವಾಗಿ ಕಾಲೇಜಿನಲ್ಲಿ ಆಯುರ್ವೇದ ರಥವನ್ನು ಅದ್ಧೂರಿಯಾಗಿ ಸ್ವಾಗತ ಮಾಡಲಾಯಿತು.

ಕಾಲೇಜಿನ ಅಕಾಡೆಮಿಕ್ ಕೋ ಆರ್ಡಿನೇಟರ್ ಡಾ. ಕವಿತಾ ಬಿ.ಎಂ ಅವರು ರಥಕ್ಕೆ ಹಾರ ಹಾಕುವ ಮೂಲಕ ಸ್ವಾಗತಿಸಿದರು. ಕಾಲೇಜಿನ ಎಲ್ಲಾ ವೈದ್ಯರುರನ್ನು ಸನ್ಮಾನಿಸಿ ಸಮ್ಮಿಲನಕ್ಕೆ ರಥ ಯಾತ್ರೆ ಸಮಿತಿಯ ಡಾ. ಶರತ್ ಕುಮಾರ್ ಹಾಗೂ ತಂಡದವರು ಆಹ್ವಾನಿಸಿದರು. ಕಾರ್ಯಕ್ರಮದಲ್ಲಿ ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.













