27.7 C
Sullia
Sunday, March 8, 2026

ಪ್ರಧಾನಮಂತ್ರಿ ಆದ ಬಳಿಕ ಮೊದಲ ಬಾರಿಗೆ ಉಡುಪಿಗೆ ಆಗಮಿಸಿದ ಮೋದಿ: ನೆಚ್ಚಿನ ನಾಯಕನಿಗೆ ಹೂ ಮಳೆ ಸುರಿಸಿ ಅದ್ದೂರಿ ಸ್ವಾಗತ

ನ್ಯೂಸ್ ನಾಟೌಟ್ : ದೇಶದ ಪ್ರಧಾನಮಂತ್ರಿ ಆದ ಬಳಿಕ ಇದೇ ಮೊದಲ ಬಾರಿಗೆ ಉಡುಪಿಗೆ ಆಗಮಿಸಿರುವ ನರೇಂದ್ರ ಮೋದಿಯವರನ್ನು ಕರಾವಳಿ ಮಂದಿ ಹೂಮಳೆ ಸುರಿಸಿ ಅದ್ದೂರಿಯಾಗಿ ಸ್ವಾಗತ ಕೋರಿದ್ದಾರೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ನವದೆಹಲಿಯಿಂದ ವಿಶೇಷ ವಿಮಾನದಲ್ಲಿ ಮಂಗಳೂರಿಗೆ ಆಗಮಿಸಿದ ಮೋದಿಯವರು, ಅಲ್ಲಿಂದ ಸೇನಾ ಹೆಲಿಕಾಪ್ಟರ್’ನಲ್ಲಿ ಉಡುಪಿಯ ಹೆಲಿಪ್ಯಾಡ್’ಗೆ ಬಂದಿಳಿದರು.

ಅಲ್ಲಿಂದ ರೋಡ್ ಶೋ ಆರಂಭವಾಗಿದ್ದು, ದಾರಿಯುದ್ದಕ್ಕೂ ಲಕ್ಷಾಂತರ ಮಂದಿ ಹೂಮಳೆ ಸುರಿಸಿ, ನೆಚ್ಚಿನ ನಾಯಕನಿಗೆ ಸ್ವಾಗತ ಕೋರಿದ್ದಾರೆ.

ಉಡುಪಿಯಿಂದ ಕೃಷ್ಣ ಮಠದವರೆಗೂ ನಡೆಯುತ್ತಿರುವ ರೋಡ್ ಶೋದಲ್ಲಿ ಪ್ರಧಾನಿ ಮೋದಿಯವರು ಅಭಿಮಾನಿಗಳತ್ತ ಕೈ ಬೀಸಿ ಸಾಗಿದ್ದಾರೆ.

ರೋಡ್ ಶೋ ಆರಂಭವಾದಾಗಿನಿಂದಲೂ ರಸ್ತೆಯ ಇಕ್ಕೆಲಗಳಲ್ಲಿ ಸಾವಿರಾರು ಮಂದಿ ನಿಂತು ಜೈಘೋಷ ಹಾಕಿ, ಹೂಮಳೆ ಸುರಿಸಿ, ನೆಚ್ಚಿನ ನಾಯಕನನ್ನು ಹತ್ತರದಿಂದ ನೋಡಿ ಕಣ್ತುಂಬಿಕೊಳ್ಳುತ್ತಿದ್ದಾರೆ.

Related Articles

LEAVE A REPLY

Please enter your comment!
Please enter your name here

Latest Articles