ನ್ಯೂಸ್ನಾಟೌಟ್: ನಮ್ಮ ಜಿಲ್ಲೆಯವರೇ ಉಸ್ತುವಾರಿ ಸಚಿವರು, ಕನ್ನಡ ಮತ್ತು ಸಂಸ್ಕೃತಿ ಸಚಿವರಾಗಿದ್ದರೂ ನಾಡಿನ ಉಳ್ಳಾಲದ ವೀರ ರಾಣಿ ಅಬ್ಬಕ್ಕೆ ಉತ್ಸವಕ್ಕೆ ಅನುದಾನ ಕಡಿತಗೊಳಿಸುವ ಮಹಿಳೆಯರಿಗೆ ಅವಮಾನ ಮಾಡಲಾಗಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಮತಾ ಗಟ್ಟಿ ಮಂಗಳವಾರ ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.
ಕಳೆದ ಹಲವು ವರ್ಷಗಳಿಂದ ಅಬ್ಬಕ್ಕ ಉತ್ಸವಕ್ಕೆ ಸರ್ಕಾರ 50 ಲಕ್ಷ ರೂ. ಅನುದಾನ ಒದಗಿಸುತ್ತಿತ್ತು. ಆದರೆ ಈ ಬಾರಿ ಅನುದಾನವನ್ನು10 ಲಕ್ಷಕ್ಕೆ ಕಡಿತಗೊಳಿಸಲಾಗಿದೆ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಅಬ್ಬಕ್ಕ ಉತ್ಸವ ಕಾರ್ಯಕ್ರಮದಲ್ಲಿ ಕೇಂದ್ರ ಕೃಷಿ ಸಚಿವರಾದ ಶೋಭಾ ಕರಂದ್ಲಾಜೆ ಅವರು ಅಬ್ಬಕ್ಕ ಥೀಂ ಪಾರ್ಕ್ ಮಾಡುವುದಾಗಿ ಪ್ರಕಟಿಸಿದ್ದಾರೆ. ಇದು ಸ್ವಾಗತಾರ್ಹ. ಥೀಂ ಪಾರ್ಕ್ನಲ್ಲಿ ರಾಣಿ ಅಬ್ಬಕ್ಕ ಅವರ ಸಾಧನೆಯನ್ನು ಸಾರುವ ಗ್ರಂಥಾಲಯವನ್ನೂ ಸ್ಥಾಪಿಸಬೇಕು. ಇದು ಚುನಾವಣೆಗಾಗಿ ನೀಡಿದ ಹೇಳಿಕೆಯಾಗದೆ ಇದಕ್ಕೆ ಬೇಕಾಗುವ ಅಗತ್ಯ ಅನುದಾನ ಒದಗಿಸಬೇಕು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಆಗಿನ ಕನ್ನಡ ಮತ್ತು ಸಂಸ್ಕೃತಿ ಸಚಿವೆ ಉಮಾಶ್ರೀ ಅವರು ತೊಕ್ಕೊಟ್ಟಿನಲ್ಲಿ ಅಬ್ಬಕ್ಕ ಸಭಾಭವನ ನಿರ್ಮಾಣಕ್ಕೆ 8 ಕೋಟಿ ರೂ. ಅನುದಾನ ಹಂಚಿಕೆ ಮಾಡಿದ್ದರೂ ಈವರೆಗೆ ಭವನವನ್ನು ಏಕೆ ನಿರ್ಮಿಸಿಲ್ಲ ಸರ್ಕಾರವನ್ನು ಪ್ರಶ್ನಿಸಿದ್ದಾರೆ.
ಪಕ್ಷದ ಮುಖಂಡರಾದ ಚಂದ್ರಕಲಾ ಜೋಗಿ, ಸುರೇಖಾ ಚಂದ್ರಹಾಸ, ಅಪ್ಪಿ, ಶಾಂತಲಾ ಗಟ್ಟಿ, ತನ್ವೀರ್ ಶಾಹಿದಾ ಸದ್ದಿಗೋಷ್ಠಿಯಲ್ಲಿದ್ದರು.