ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಸರ್ವಸಿದ್ಧತೆ
ನ್ಯೂಸ್ ನಾಟೌಟ್: ರಾಜ್ಯ ವಿಧಾನಸಭಾ ಚುನಾವಣೆಗೆ ಶೀಘ್ರದಲ್ಲೇ ದಿನಾಂಕ ಘೋಷಣೆಯಾಗಲಿದ್ದು, ಕೆಂದ್ರ ಚುನಾವಣಾ ಆಯೋಗ ಸರ್ವಸಿದ್ಧತೆ ನಡೆಸುತ್ತಿದೆ. ಒಟ್ಟು 224 ಕ್ಷೇತ್ರಗಳಿಗೂ ಚುನಾವಣಾಧಿಕಾರಿಗಳನ್ನು ಮತ್ತು ಸಹಾಯಕ ಚುನಾವಣಾಧಿಕಾರಿಗಳನ್ನು ನೇಮಕ ಮಾಡಿ ಆದೇಶಿಸಿದ್ದು, ಈ ಬಗ್ಗೆ ಕೇಂದ್ರ ಚುನಾವಣಾ ಆಯೋಗವು ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ಪತ್ರ ಬರೆದು ಮಾಹಿತಿ ನೀಡಿದೆ.
ಪ್ರತೀ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ಇಲಾಖೆಯ ಅಧಿಕಾರಿಗಳನ್ನು ಚುನಾವಣಾಧಿಕಾರಿಗಳಾಗಿ ಮತ್ತು ತಹಶೀಲ್ದಾರ್ ಸೇರಿದಂತೆ ಇತರ ಅಧಿಕಾರಿಗಳನ್ನು ಸಹಾಯಕ ಚುನಾವಣಾಧಿಕಾರಿಯಾಗಿ ನಿಯೋಜನೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿಎಲ್ಲ ಅಧಿಕಾರಿಗಳು ಸರ್ವಸಿದ್ಧತೆಗಳನ್ನು ಹಾಗೂ ಮುಂಜಾಗೃತ ಕ್ರಮಗಳನ್ನು ಮಾಡಲಾಗಿದೆ ಎಂದು ತಿಳಿದುಬಂದಿದೆ.