ನ್ಯೂಸ್ ನಾಟೌಟ್: ರಾಜ್ಯ ಬಜೆಟ್ಗೆ ಕ್ಷಣಗಣನೆ ಆರಂಭವಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಬೆಳಗ್ಗೆ 10.15ಕ್ಕೆ ಬಜೆಟ್ ಮಂಡಿಸಲಿದ್ದು, ಈ ಹಿನ್ನೆಲೆಯಲ್ಲಿಇಂದು ಮುಂಜಾನೆ ಬೆಂಗಳೂರಿನ ಆರ್.ಟಿ. ನಗರದ ಶ್ರೀ ಕಂಠೇಶ್ವರ ದೇವಳ ಮತ್ತು ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ಈ ವೇಳೆ ನಾಡಿನ ಸಮಸ್ತ ಜನತೆಗೆ ಒಲಿತಾಗಲಿ ಎಂದು ಅರ್ಚನೆ ಸಲ್ಲಿಸಿದರು. ಈ ವೇಳೆ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ, ಕೋಟ ಶ್ರೀನಿವಾಸ ಪೂಜಾರಿ ಮತ್ತಿತರರು ಜತೆಗಿದ್ದರು.
ಸಂಪುಟ ಸಭೆ: ದೇವಳಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಜೆಟ್ ಪುಸ್ತಕದೊಂದಿಗೆ ವಿಧಾನಸೌಧಕ್ಕೆ ಆಗಮಿಸಿದ್ದಾರೆ. ಬಜೆಟ್ ಮಂಡನೆಗೂ ಮುನ್ನ ಸಿಎಂ ನೇತೃತ್ವದಲ್ಲಿ ಸಂಪುಟ ಸಭೆ ನಡೆಸಿ ಬಜೆಟ್ಗೆ ಅನುಮೋದನೆ ಪಡೆದಿದ್ದಾರೆ. ಈಗಾಗಲೇ ಬಜೆಟ್ ಪ್ರತಿಗಳನ್ನು ಪೊಲೀಸರು ವಿಧಾನಸೌಧಕ್ಕೆ ತಲುಪಿಸಿದ್ದು, ಕೆಲವೇ ಕ್ಷಣಗಳಲ್ಲಿ ಮುಖ್ಯಮಂತ್ರಿ ಬಜೆಟ್ ಮಂಡಿಸಲಿದ್ದಾರೆ.