ನ್ಯೂಸ್ ನಾಟೌಟ್: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರಕಾರ ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ರೈತ ಪರವಾದ ಭರ್ಜರಿ ಘೋಷಣೆ ಮಾಡಿದ್ದಾರೆ.
ಸಣ್ಣ ಹಾಗೂ ಮಧ್ಯಮ ರೈತರ ಸಾಲ ಮಿತಿಯನ್ನು 3 ಲಕ್ಷದಿಂದ 5 ಲಕ್ಷದವರೆಗೆ ವಿಸ್ತರಣೆ ಮಾಡಿದ್ದಾರೆ. ಸಹಜವಾಗಿಯೇ ಇದು ರೈತರ ಮುಖದಲ್ಲಿ ಸಂತಸವನ್ನು ಹೆಚ್ಚಿಸಿದೆ. ಈ ಬಾರಿ ಶೂನ್ಯ ಬಡ್ಡಿ ದರದಲ್ಲಿ ರೈತರಿಗೆ 5 ಲಕ್ಷ ರೂ. ಸಾಲ, 30 ಲಕ್ಷಕ್ಕಿಂತ ಹೆಚ್ಚು ರೈತರಿಗೆ 25 ಸಾವಿರ ಕೋಟಿ ಸಾಲ, ಕಿಸಾನ್ ಕಾರ್ಡ್ ಹೊಂದಿರುವ ರೈತರಿಗೆ ಭೂಸಿರಿ ಯೋಜನೆ; 2023-24ನೇ ಸಾಲಿನಿಂದ ಹೆಚ್ಚುವರಿಯಾಗಿ 10 ಸಾವಿರ ರೂ ಸಹಾಯಧನ ದೊರೆಯಲಿದೆ.
ಬಜೆಟ್ ಆರಂಭಕ್ಕೂ ಮುನ್ನವೇ ವಿಧಾನಸಭೆಯಲ್ಲಿ ಗದ್ದಲ ಜೋರಾಯಿತು. ಕಾಂಗ್ರೆಸ್ ಜನರ ಕಿವಿಗೆ ಹೂವು ಇಟ್ಟಿದೆ ಎಂದು ಕಿಡಿಕಾರಿದರು. ನಾಯಕರು ಸಹಿತ ವಿರೋಧ ಪಕ್ಷದ ನಾಯಕರು ಸಿಎಂ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಜೆಟ್ ಆರಂಭದಲ್ಲೇ ಸಿಎಂ ವಿರೋಧ ಪಕ್ಷಗಳ ವಿರುದ್ಧ ಹರಿಹಾಯ್ದರು. ಇದರಿಂದ ಕೆಲವು ಹೊತ್ತು ಸದನದಲ್ಲಿ ಭಾರಿ ವಾದ-ಪ್ರತಿವಾದ ಮುಂದುವರಿಯಿತು.