27.7 C
Sullia
Sunday, March 8, 2026

ಮತ್ತೆ ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷವನ್ನ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ: ಸಿಎಂ – ಡಿಸಿಎಂ ಒಗ್ಗಟಿನ ಸಂದೇಶ

ನ್ಯೂಸ್ ನಾಟೌಟ್ : ನಮ್ಮ ನಡುವೆ ಭಿನ್ನ ಇಲ್ಲ, ಹೈಕಮಾಂಡ್‌ ಹೇಳಿದಂತೆ ಕೇಳ್ತೇವೆ ಎಂದು ಸಿಎಂ ಹಾಗೂ ಡಿಸಿಎಂ ಒಗ್ಗಟಿನ ಸಂದೇಶ ಸಾರಿದ್ದಾರೆ.ಸಿದ್ದರಾಮಯ್ಯ (Siddaramaiah) ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಅವರಿಂದು ಜಂಟಿ ಸುದ್ದಿಗೋಷ್ಠಿಯಲ್ಲಿ ಘೋಷಣೆ ಮಾಡಿದ್ದು, ನಾವಿಬ್ಬರು ಒಂದಾಗಿದ್ದೇವೆ, ಹೈಕಮಾಂಡ್‌ ಹೇಳಿದಂತೆ ಕೇಳುತ್ತೇವೆ. ಪಕ್ಷವನ್ನ ಇನ್ನಷ್ಟು ಶಕ್ತಿಶಾಲಿಗೊಳಿಸಿ 2028ಕ್ಕೆ ಮತ್ತೆ ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷವನ್ನ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ ಎಂದು ಹೇಳಿದ್ದಾರೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಅನಗತ್ಯವಾಗಿ ಕೆಲವು ಗೊಂದಲಗಳು ನಿರ್ಮಾಣ ಆಗಿವೆ. ನಾವಿಬ್ಬರೇ ಕೂತು ಮಾತನಾಡಿದ್ವಿ. 2028ರ ಚುನಾವಣೆ (2028 Election) ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ನಮಗೆ ಬಹಳ ಮುಖ್ಯ. ಅದರ ಬಗ್ಗೆಯೂ ಚರ್ಚೆ ಮಾಡಿದ್ವಿ. 2028ರಲ್ಲೂ ಕಾಂಗ್ರೆಸ್‌ ಅಧಿಕಾರಕ್ಕೆ ತರಬೇಕು ಅನ್ನೋದ್ರ ಬಗ್ಗೆ ಚರ್ಚೆ ಮಾಡಿದ್ವಿ. 2023ರಲ್ಲಿ ಹೇಗೆ ನಾವಿಬ್ಬರು ಒಟ್ಟಿಗೆ ಕೆಲಸ ಮಾಡಿದ್ವೋ ಅದೇ ರೀತಿ ಮುಂದೆನೂ ಒಟ್ಟಿಗೆ ಕೆಲಸ ಮಾಡ್ತೀವಿ. ನನ್ನ – ಡಿಕೆ ನಡುವೆ ಭಿನ್ನ ಇಲ್ಲ. ನಾವು ಒಟ್ಟಾಗಿದ್ದೇವೆ ಎಂದುಸಿಎಂ ಒಗ್ಗಟ್ಟಿನ ಸಂದೇಶ ಸಾರಿದರು.

ನಾಳೆಯಿಂದ ಗೊಂದಲ ಇರಲ್ಲ
ನಾವು 142 ಜನ ಇದ್ದೇವೆ. ಅವರು 64 ಜನ ಮಾತ್ರ ಇದ್ದಾರೆ. ಜೆಡಿಎಸ್‌ ಇರೋದು 18 ಜನ ಮಾತ್ರ. ಅವರಿಬ್ಬರು ಸೇರಿ ಏನೇ ಆರೋಪ ಮಾಡಿದ್ರೂ ಅದೆಲ್ಲವನ್ನ ಸಮರ್ಥವಾಗಿ ಎದುರಿಸುವ ಕೆಲಸ ಮಾಡ್ತೇವೆ. ಬಹಳ ಮುಖ್ಯಮಾಗಿ ಹೈಕಮಾಂಡ್‌ ಏನ್‌ ಹೇಳ್ತಾರೆ ಅದನ್ನ ಕೇಳೋಕೆ ತೀರ್ಮಾನ ಮಾಡಿದ್ದೇವೆ ಎಂದರಲ್ಲದೇ, ಕೇಂದ್ರದಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿರೋದ್ರಿಂದ ಹೈಕಮಾಂಡ್‌ ಇಲ್ಲಿನ ಗೊಂದಲಗಳನ್ನ ನಮಗೇ ಬಗೆಹರಿಸಲು ಹೇಳಿದ್ದಾರೆ. ನಾಳೆಯಿಂದ ಯಾವುದೇ ಗೊಂದಲ ಇರಲ್ಲ ಎಂದು ಕುರ್ಚಿ ಕದನಕ್ಕೆ ತೆರೆ ಎಳೆದರು.

ದೆಹಲಿಗೆ ಹೋಗಿದ್ದ ಕೆಲ ಶಾಸಕರು ನನ್ನ ಹತ್ರ ಬಂದು ಮಾತಾಡಿದ್ರು, ಯಾಕಾಗಿ ದೆಹಲಿಗೆ ಹೋಗಿದ್ವಿ ಅನ್ನೋದನ್ನ ಹೇಳಿದ್ರು ಎಂದು ಶಾಸಕರು, ಸಚಿವರ ದೆಹಲಿ ಪರೇಡ್‌ಗೆ ಸಮರ್ಥನೆ ನೀಡಿದರು.

Related Articles

LEAVE A REPLY

Please enter your comment!
Please enter your name here

Latest Articles