27.7 C
Sullia
Sunday, March 8, 2026

ಬಸ್ -ಬೈಕ್ ನಡುವೆ ಅಪಘಾತ, ನಡು ರಸ್ತೆಯಲ್ಲೇ ಪ್ರಾಣ ಬಿಟ್ಟ ಬೈಕ್ ಸವಾರ..!

ನ್ಯೂಸ್ ನಾಟೌಟ್ : ಬಸ್ ಮತ್ತು ಬೈಕ್ ಮಧ್ಯೆ ಭೀಕರ ಅವಘಾತ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ಭಾನುವಾರ ಬೆಳಗ್ಗೆ ಬೆಳ್ತಂಗಡಿ ತಾಲೂಕಿನ ಪಾರ್ಪಿಕಲ್ಲು ಎಂಬಲ್ಲಿ ಸಂಭವಿಸಿದೆ. ಮೃತ ಬೈಕ್ ಸವಾರನನ್ನು ಮೂಲತಃ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ದೊಡ್ಡಗಣಹಳ್ಳಿ ನಿವಾಸಿ ಪನ್ನ ಕೇಶವ ಗೌಡ ಎಂಬವರ ಪುತ್ರ ದೀಪಕ್(24) ಎಂದು ಗುರುತಿಸಲಾಗಿದೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಧರ್ಮಸ್ಥಳ ಕಡೆಗೆ ಬರುತ್ತಿದ್ದ ಸರಕಾರಿ ಬಸ್ ಮತ್ತು ಧರ್ಮಸ್ಥಳ ಕಡೆಯಿಂದ ಬೆಂಗಳೂರು ಕಡೆ ಹೋಗುತ್ತಿದ್ದ ಬೈಕ್ ಮಧ್ಯೆ ಈ ಅಪಘಾತ ಸಂಭವಿಸಿದೆ. ಮೃತದೇಹವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ಬೆಳ್ತಂಗಡಿ ಸಂಚಾರ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

Related Articles

LEAVE A REPLY

Please enter your comment!
Please enter your name here

Latest Articles