ನ್ಯೂಸ್ ನಾಟೌಟ್: ಬ್ಯಾಂಕ್ ಆಫ್ ಬರೋಡಾದಲ್ಲಿ 546 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.ವಿವಿಧ ಹುದ್ದೆಗಳಿಗೆ ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಮತ್ತು ಕನಿಷ್ಟ 21 ರಿಂದ ಗರಿಷ್ಟ 50 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ವರ್ಷಕ್ಕೆ 4 ಲಕ್ಷದಿಂದ 5 ಲಕ್ಷದ ವರೆಗೆ ವೇತನವನ್ನು ನೀಡಲಾಗುವುದು.ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.ಅರ್ಜಿದಾರರು 600/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಮಹಿಳಾ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕಾಗಿರುತ್ತದೆ.ಅರ್ಜಿದಾರರು ಆನ್ಲೈನ್ ಮೂಲಕ ಮಾರ್ಚ್ 14,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.