ನ್ಯೂಸ್ ನಾಟೌಟ್: ಕೇರಳದ ತಿರುವನಂತಪುರಂನ ಅಂತಾರಾಷ್ಟೀಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ತುರ್ತು ಪರಿಸ್ಥಿತಿ ಘೋಷಿಸಲಾಯಿತು. ಏರ್ ಇಂಡಿಯಾ ಎಕ್ಸ್ಪ್ರೆಸ್ನ ಐಎಕ್ಸ್ 385 ವಿಮಾನ ಕೋಝಿಕೊಡ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಮಯ್ ಏರ್ಪೋರ್ಟ್ಗೆ ಹೋಗುತ್ತಿದ್ದ ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದಿದ್ದರಿಂದ ತಿರುವನಂತಪುರ ಅಂತಾರಾಷ್ಟೀಯ ವಿಮಾನ ನಿಲ್ದಾಣಕ್ಕೆ ತಿರುಗಿಸಲಾಯಿತು. ನಂತರ ತುರ್ತು ಪರಿಸ್ಥಿತಿ ಘೋಷಿಸಿ ಮಧ್ಯಾಹ್ನ12.15ರ ಸುಮಾರಿಗೆ ತುರ್ತು ಭೂಸ್ಪರ್ಶ ಮಾಡಲಾಯಿತು ಎಂದು ಮೂಲಗಳು ತಿಳಿಸಿವೆ.
ix 385 ವಿಮಾನದಲ್ಲಿ 182 ಪ್ರಯಾಣಿಕರಿದ್ದರು. ಬೆಳಗ್ಗೆ 11 ಗಂಟೆಗೆ ಸರಿಯಾಗಿ ವಿಮಾನ ಕೋಝಿಕೊಡ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಮಯ್ ಏರ್ಪೋರ್ಟ್ಗೆ ತಲುಪಬೇಕಿತ್ತು.
ಆದರೆ ವಿಮಾನ ತುರ್ತು ಭೂಸ್ಪರ್ಶಕ್ಕೆ ವಿಮಾನದ ಹೈಡ್ರಾಲಿಕ್ ಗೇರ್ ಹಾಳಾಗಿರುವುದೇ ಕಾರಣ ಎಂದು ಶಂಕಿಸಲಾಗಿದೆ. ಮಾಹಿತಿಯ ಪ್ರಕಾರ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದು, ಬೇರೊಂದು ವಿಮಾನದಲ್ಲಿ ಪ್ರಯಾಣ ಮಾಡುವ ವ್ಯವಸ್ಥೆ ಮಾಡಲಾಗಿದೆ.