ನ್ಯೂಸ್ ನಾಟೌಟ್ : ಬೀದಿ ನಾಯಿಯ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಅತ್ಯಾಚಾರವೆಸಗಿದ ವಿಚಿತ್ರ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯ ಹರಿ ನಗರ ಪ್ರದೇಶದಲ್ಲಿ ವರದಿಯಾಗಿದೆ.
ವಿವರಗಳ ಪ್ರಕಾರ,ವಿಕೃತ ಕಾಮಿಯೊಬ್ಬನಿಂದ ಹರಿ ನಗರ ಪ್ರದೇಶದ ಉದ್ಯಾನವನದಲ್ಲಿ ನಾಯಿಯ ಮೇಲೆ ಅತ್ಯಾಚಾರ ನಡೆಸಲಾಗಿದ್ದು, ಈ ಘಟನೆಯ ವಿಡಿಯೋ ವೈರಲ್ ಆದ ನಂತರ ಹರಿನಗರದ ಸ್ಥಳೀಯರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ದೂರಿನ ನಂತರ, ಪೊಲೀಸರು ಕ್ರಮ ಕೈಗೊಂಡಿದ್ದು, ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆ (IPC) ಮತ್ತು ಪ್ರಾಣಿಗಳ ರಕ್ಷಣಾ ಕಾಯಿದೆಯ ಸೆಕ್ಷನ್ 377/11 ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. ವಿಡಿಯೋ ಆಧರಿಸಿ ಆರೋಪಿಗಳ ಪತ್ತೆಗೆ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.