ನ್ಯೂಸ್ನಾಟೌಟ್: ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ.ದೇವೆಗೌಡ ಅನಾರೋಗ್ಯದಿಂದ ಮಂಗಳವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕಾಲು ಊತ ಜಾಸ್ತಿ ಆಗಿದ್ದ ಕಾರಣ ಜನರಲ್ ಚೆಕಪ್ಗೆ ಆಸ್ಪತ್ರೆಗೆ ಆಗಮಿಸಿದ್ದರು. ಪರಿಶೀಲನೆ ನಡೆಸಿದ್ದ ವೈದ್ಯರು, ಒಂದು ವಾರ ಕಾಲ ವಿಶ್ರಾಂತಿ ಪಡೆಯಲು ಸೂಚಿಸಿದ್ದಾರೆ.
ದೇವೇಗೌಡರ ಆರೋಗ್ಯ ಸ್ಥಿತಿ ಅಷ್ಟೊಂದು ಉತ್ತಮವಾಗಿಲ್ಲ ಎಂದು ಎರಡು ದಿನಗಳ ಹಿಂದೆಯೇ ಕುಮಾರಸ್ವಾಮಿ ತಿಳಿಸಿದ್ದರು. ದೇವೇಗೌಡರು ಇಂದು ಚಿಕಿತ್ಸೆಗಾಗಿ ಆಸ್ಪತ್ರೆಗೆ ಹೋಗಿದ್ದಾರೆ. ಆಸ್ಪತ್ರೆಯಿಂದ ಬಂದ ಬಳಿಕ ಹಾಸನ ಕ್ಷೇತ್ರದ ಜೆಡಿಎಸ್ ಟಿಕೆಟ್ ನೀಡಿಕೆ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದರು. ಈ ವಿಚಾರವಾಗಿ ದೇವೇಗೌಡರಿಗೆ ಹೆಚ್ಚಿನ ಹೊರೆ ನೀಡುವುದು ತನಗಿಷ್ಟವಿಲ್ಲ. ದೇವೇಗೌಡರ ಆರೋಗ್ಯವೇ ಮುಖ್ಯ ಎಂದು ಕುಮಾರಸ್ವಾಮಿ ಹೇಳಿದ್ದರು.