ನ್ಯೂಸ್ ನಾಟೌಟ್: ಸರಕಾರಿ ನೌಕರರ ಮುಷ್ಕರದ ಹಿನ್ನೆಲೆಯಲ್ಲಿ ಇಂದು, ಮಾ.1 ರಂದು ನಡೆಯಬೇಕಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ಎಲ್ಲ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ.
ಏಳನೇ ವೇತನ ಆಯೋಗದ ಶಿಫಾರಸುಗಳನ್ನು ತತ್ಕ್ಷಣ ಜಾರಿಗೆ ತರಬೇಕು ಎಂದು ಬಿಗಿ ಪಟ್ಟು ಹಿಡಿದಿರುವ ಸರಕಾರಿ ನೌಕರರು ಬುಧವಾರದಿಂದ ಕರ್ತವ್ಯಕ್ಕೆ ಗೈರುಹಾಜರಾಗುವ ಮೂಲಕ ಸರಕಾರದ ವಿರುದ್ಧ ಅಸಹಕಾರ ಚಳವಳಿಗೆ ಸಜ್ಜಾಗಿದ್ದಾರೆ.
ಈ ಹಿನ್ನೆಲೆಯಲ್ಲಿ ಪ್ರಕಟಣೆ ಹೊರಡಿಸಿರುವ ವಿವಿಯ ಕುಲಸಚಿವರು ಮಾ.1ರಂದು ಸರಕಾರಿ ಉದ್ಯೋಗಿಗಳು ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಇಂದು ನಡೆಯಬೇಕಿದ್ದ ಮಂಗಳೂರು ವಿವಿಯ ಎಲ್ಲಾ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ, ಮುಂದೂಡಲಾದ ವೇಳಾಪಟ್ಟಿಯನ್ನು ಶೀಘ್ರ ಮರುಪ್ರಕಟಣೆ ಹೊರಡಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.