ನ್ಯೂಸ್ ನಾಟೌಟ್ :ಮಹಿಳೆಯೊಬ್ಬರು ತನ್ನಿಬ್ಬರು ಮಕ್ಕಳೊಂದಿಗೆ ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳೂರಿನ ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡಿಯಾಲ್ಗುತ್ತು ಬಳಿ ನಡೆದಿದೆ. ಘಟನೆಯಲ್ಲಿ ಮಹಿಳೆ ಮತ್ತು ಓರ್ವ ಪುತ್ರಿ ಮೃತಪಟ್ಟರೆ, ಇನ್ನೋರ್ವ ಪುತ್ರಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ.
ಕೋಡಿಯಾಲ್ಗುತ್ತು ನಿವಾಸಿ ವಿಜಯಾ (33) ಮತ್ತವರ ಮಗಳು ಶೋಭಿಖಾ (4) ಮೃತಪಟ್ಟವರು. ಈಕೆಯ 12 ವರ್ಷದ ಇನ್ನೋರ್ವ ಪುತ್ರಿ ಅಪಾಯದಿಂದ ಪಾರಾಗಿದ್ದಾಳೆ. ವಿಜಯಾರ ಪತಿ ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡಿದ್ದು, ಅವರು ತನ್ನಿಬ್ಬರು ಮಕ್ಕಳೊಂದಿಗೆ ಸ್ವಂತ ಮನೆಯಲ್ಲಿ ವಾಸವಾಗಿದ್ದರು. ವಿಜಯಾ ಇಬ್ಬರು ಮಕ್ಕಳನ್ನು ಒಂದೇ ಕುಣಿಕೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡಿದ್ದು, ಒರ್ವ ಮಗಳು ಕುಣಿಕೆಯಿಂದ ತಪ್ಪಿಸಿಕೊಂಡು ಬದುಕುಳಿದಿದ್ದಾಳೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.