ನ್ಯೂಸ್ ನಾಟೌಟ್ :ಖ್ಯಾತ ನಟಿ, ಮಾಜಿ ವಿಶ್ವ ಸುಂದರಿ ಸುಶ್ಮಿತಾ ಸೇನ್ ಅವರಿಗೆ ಹೃದಯಾಘಾತ ಆಗಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಕೆಲವೇ ದಿನಗಳ ಹಿಂದೆ ನಡೆದ ಈ ಘಟನೆ ಈಗ ಬೆಳಕಿಗೆ ಬಂದಿದೆ ಎಂದು ತಿಳಿದು ಬಂದಿದೆ.
ಸದ್ಯ ಅವರು ಈಗ ಆರೋಗ್ಯವಾಗಿದ್ದಾರೆಂದು ತಿಳಿದು ಬಂದಿದೆ. ಹೃದಯಾಘಾತ ಆದ ಕೂಡಲೇ ಅವರಿಗೆ ವೈದ್ಯಕೀಯ ನೆರವು ಸಿಕ್ಕಿತು. ವೈದ್ಯರ ಸಲಹೆ ಮೇರೆಗೆ ಆಂಜಿಯೋಪ್ಲಾಸ್ಟಿ ಮಾಡಲಾಗಿದೆ ಮತ್ತು ಸ್ಟೆಂಟ್ಸ್ ಅಳವಡಿಸಲಾಗಿದೆ. ಈಗ ತಮ್ಮ ಆರೋಗ್ಯ ಸ್ಥಿರವಾಗಿದೆ ಎಂದು ಸುಶ್ಮಿತಾ ಸೇನ್ ಅವರು ಹೆಲ್ತ್ ಅಪ್ಡೇಟ್ ನೀಡಿದ್ದಾರೆ.ಈ ಸುದ್ದಿ ಕೇಳಿ ಅವರ ಅಭಿಮಾನಿಗಳು ಆತಂಕಕ್ಕೆ ಒಳಗಾಗಿದ್ದರು. ಸುಶ್ಮಿತಾ ಸೇನ್ ಅವರ ಸೋಶಿಯಲ್ ಮೀಡಿಯಾ ಪೋಸ್ಟ್ಗೆ ನೆಟ್ಟಿಗರು ಕಮೆಂಟ್ ಮಾಡುವ ಮೂಲಕ ಕಾಳಜಿ ವ್ಯಕ್ತಪಡಿಸಿದ್ದಾರೆ. ಆರೋಗ್ಯದ ಬಗ್ಗೆ ಹೆಚ್ಚು ಗಮನ ಹರಿಸುವಂತೆ ಫ್ಯಾನ್ಸ್ ಸಲಹೆ ನೀಡಿದ್ದಾರೆ.