ನ್ಯೂಸ್ ನಾಟೌಟ್ : ಮಡಿಕೇರಿ ತಾಲೂಕಿನ ಕರ್ಣಂಗೇರಿ ಗ್ರಾಮದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯವಾದ ಸ್ಮಾರಕ ನಿರ್ಮಾಣವಾಗಲಿದೆ. ಇದಕ್ಕಾಗಿ ಸರ್ಕಾರದಿಂದ 50 ಲಕ್ಷ ರೂ. ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಶಾಸಕ ಕೆ.ಜಿ. ಬೋಪಯ್ಯ ತಿಳಿಸಿದರು.
ಮಡಿಕೇರಿ ತಾಲೂಕಿನ ಕರ್ಣಂಗೇರಿ ಗ್ರಾಮದ ಸರ್ವೇ ನಂ. 471/1 ರಲ್ಲಿ 0.12 ಎಕರೆ ಮತ್ತು ಸರ್ವೇ ನಂ. 471/4 ರಲ್ಲಿ 0.20 ಎಕರೆ ಜಾಗವನ್ನು ಸರ್ವೇಯಿಂದ ಗುರುತಿಸಿ ನಕಾಶೆಯೆಯಂತೆ ಗಾಂಧೀಜಿ ಚಿತಾಭಸ್ಮವನ್ನಿಟ್ಟು ಶಾಶ್ವತವಾದ ಸ್ಮಾರಕ ನಿರ್ಮಿಸಲಾಗುವುದು. ಸತತ ಪ್ರಯತ್ನದಿಂದ ಸರ್ಕಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಮೂಲಕ 50 ಲಕ್ಷ ರೂಪಾಯಿಯನ್ನು ಕೊಡಗು ಜಿಲ್ಲಾಧಿಕಾರಿಯವರಿಗೆ ಬಿಡುಗಡೆ ಮಾಡಲು ಮಂಜೂರು ಮಾಡಿ ಆದೇಶಿಸಲಾಗಿದೆ ಎಂದು ಕೆ.ಜಿ. ಬೋಪಯ್ಯ ತಿಳಿಸಿದ್ದಾರೆ.