ನ್ಯೂಸ್ ನಾಟೌಟ್: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಸಹಿತ ಕರ್ನಾಟಕದ ಕರಾವಳಿ ಭಾಗದಲ್ಲಿ ಮಾ. 4ರಂದು ಬಲವಾದ ಬಿಸಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದೆ.
ಹವಾಮಾನ ತಜ್ಞ ಡಾ| ರಾಜೇಗೌಡ ಪ್ರಕಾರ, “ಮೆಡಿಟರೇನಿಯನ್ ಪ್ರದೇಶದಲ್ಲಿ ಡಸ್ಟ್ ಸ್ಟಾರ್ಮ್ (ಧೂಳುಮಿಶ್ರಿತ ಬಿರುಗಾಳಿ) ಆರಂಭ ವಾಗಿದೆ. ವಾತಾವರಣದಲ್ಲಿ ಒತ್ತಡ ಕಡಿಮೆ ಯಾದರೆ ಡಸ್ಟ್ ಸ್ಟಾರ್ಮ್ ದಕ್ಷಿಣದ ಕಡೆಗೂ ಬೀಸುವ ಸಾಧ್ಯತೆ ಇರುತ್ತದೆ ಎನ್ನುತ್ತಾರೆ.
ಕರಾವಳಿಯಲ್ಲಿ ಕಳೆದ ಕೆಲವು ದಿನಗಳಲ್ಲಿ ಬೆಳಗ್ಗೆ ಮಂಜಿನಿಂದ ವಿಪರೀತ ಚಳಿ ಅನುಭವವಿದ್ದರೆ, ಸೂರ್ಯ ನೆತ್ತಿಗೇರುತ್ತಿದ್ದಂತೆ, ಸುಡು ಬಿಸಿಲು ಆವರಿಸಿ, ಹೊರಾಂಗಣದಲ್ಲಿ ಕೆಲಸ ಮಾಡುವವರನ್ನು ಬೆವರಿಳಿಸಿ ಬಿಡುತ್ತದೆ. ಮಂಗಳೂರಿನಲ್ಲಿ ಸದ್ಯದ ತಾಪಮಾನ ಗರಿಷ್ಠ 33 ಮತ್ತು ಕನಿಷ್ಠ 25 ಇದೆ.
ಮಾ.15ರ ವೇಳೆಗೆ ತಾಪಮಾನ ಇನ್ನಷ್ಟು ಹೆಚ್ಚಲಿದೆ. ಗರಿಷ್ಠ 34 ಮತ್ತು ಕನಿಷ್ಠ 26ಕ್ಕೇರಲಿದೆ. ಸದ್ಯದ ಮಾಹಿತಿಯಂತೆ ಮಾರ್ಚ್ ಮೂರನೇ ವಾರದವರೆಗೆ ಗರಿಷ್ಠ ಉಷ್ಣಾಂಶ ಇದೇ ರೀತಿ ಇರಲಿದೆ ಎಂದು ಮಾಹಿತಿ ತಿಳಿದು ಬಂದಿದೆ.