ನ್ಯೂಸ್ ನಾಟೌಟ್: ಮಡಿಕೇರಿಯಿಂದ ಮಂಗಳೂರು ಕಡೆಗೆ ಲಾರಿಯಲ್ಲಿ ಅಕ್ರಮವಾಗಿ ಹೆಬ್ಬಲಸು ಮರದ ತುಂಡುಗಳನ್ನು ಸಾಗಿಸುತ್ತಿದ್ದ ಆರೋಪದಲ್ಲಿ ವ್ಯಕ್ತಿಯೋರ್ವನನ್ನು ಬಂಧಿಸಲಾಗಿದೆ. ಆರೋಪಿಯನ್ನು ಮಂಗಳೂರು ಅಸೈಗೋಳಿಯ ಮಹಮ್ಮದ್ ಸಪ್ವಾನ್ ಎಂದು ಗುರುತಿಸಲಾಗಿದೆ.
ಸಂಪಾಜೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಮರ ಸಾಗಾಟಕ್ಕೆ ಬಳಸಿದ್ದ ವಾಹನ ಸೇರಿದಂತೆ ಒಟ್ಟು12 ಹೆಬ್ಬಲಸು ಮರದ ದಿಮ್ಮಿಗಳನ್ನು ವಶಕ್ಕೆ ಪಡೆದಿದ್ದಾರೆ.ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ತನಿಖೆ ಕೈಗೆತ್ತಿಗೊಳ್ಳಲಾಗಿದೆ.
ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಪೂವಯ್ಯ.ಎ.ಟಿ, ಸಹಾಯಕ ಅರಣ್ಯಸಂರಕ್ಷಣಾಧಿಕಾರಿ ಮೊಯಿಷಿನ್ ಬಾಷಾ ಹಾಗೂ ವಲಯ
ಅರಣ್ಯಾಧಿಕಾರಿ ಅನನ್ಯಕುಮಾರ್ ಮಾರ್ಗದರ್ಶನದಲ್ಲಿ ತನಿಖಾ ಠಾಣೆಯಲ್ಲಿ ಕಾರ್ಯನಿರತರಾಗಿದ್ದ ಉಪವಲಯ ಅರಣ್ಯಾಧಿಕಾರಿ ಬಸವರಾಜಪ್ಪ ಪ್ರಕರಣ ಪತ್ತೆ ಹಚ್ಚಿದರು. ಕಾರ್ಯಾಚರಣೆಯಲ್ಲಿ ಉಪ ವಲಯ ಅರಣ್ಯಾಧಿಕಾರಿ ವಿನಯಕೃಷ್ಣ ಎಂ.ಸಿ, ಗಸ್ತು ಅರಣ್ಯಪಾಲಕರಾದ ನಾಗರಾಜ್ ಎಸ್,ಕಾರ್ತಿಕ್ ,ವಾಹನ ಚಾಲಕರಾದ ಶಿವಪ್ರಸಾದ್, ಮನೋಜ್ ಮತ್ತಿತರ ಸಿಬ್ಬಂದಿಗಳು ಪಾಲ್ಗೊಂಡಿದ್ದರು.