ನ್ಯೂಸ್ ನಾಟೌಟ್ : ಪುತ್ತೂರಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು,ಪಾದಚಾರಿ ವೃದ್ದರೋರ್ವರು ಮೃತಪಟ್ಟ ಘಟನೆ ನಡೆದಿದೆ.ಬೈಕ್ ಸವಾರ ಗಂಭೀರ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಯುವಕ ಗಂಭೀರ:
ಮಾಣಿ ಮೈಸೂರು ಹೆದ್ದಾರಿಯ ಪುತ್ತೂರಿನ ಕೌಡಿಚ್ಚಾರ್ ನಲ್ಲಿ ಈ ಘಟನೆ ನಡೆದಿದ್ದು,ಮೃತರನ್ನು ಕಾವು ಮಿನೋಜಿಕಲ್ಲು ನಾರಾಯಣ ನಾಯ್ಕ ಎಂದು ಗುರುತಿಸಲಾಗಿದೆ. ಗಾಯಾಳು ಯುವಕನನ್ನು ಉಬರಡ್ಕ ನಿವಾಸಿ ಗುರುಪ್ರಸಾದ್ ಎಂದು ಗುರುತಿಸಲಾಗಿದೆ.ಅಪಘಾತವಾಗಿ ಬಿದ್ದಿದ್ದ ಗಾಯಾಳುಗಳನ್ನು ಅದೇ ದಾರಿಯಾಗಿ ಕಚೇರಿಯಿಂದ ಬರುತ್ತಿದ್ದ ಪುತ್ತೂರಿನ ಯುವ ನ್ಯಾಯಾವಾದಿ, ಹಿಂದೂ ಜಾಗರಣ ವೇದಿಕೆಯ ಮುಖಂಡ ಚಿನ್ಮಯ್ ರೈ ಈಶ್ವರಮಂಗಲ, ಅರಿಯಡ್ಕ ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖರಾದ ಸಚಿನ್ ರೈ ಪಾಪೆಮಜಲು ಹಾಗೂ ಹಿಂಜಾವೆ ಪ್ರಮುಖ ಜಗದೀಶ್ ಜೊತೆಗೂಡಿ ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದು, ಅದಾಗಲೇ ನಾರಾಯಣ ನಾಯ್ಕ್ ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ.ಸದ್ಯ ಯುವಕನ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ದಾಖಲಾಗಿಸಲಾಗಿದೆ.