ನ್ಯೂಸ್ ನಾಟೌಟ್ : ಸುಳ್ಯದ ಕೆವಿಜಿ ಮೆಡಿಕಲ್ ಕಾಲೇಜಿನಲ್ಲಿ ಬುಧವಾರ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅದ್ಧೂರಿಯಾಗಿ ನಡೆಯಿತು.
ಈ ವೇಳೆ ಸಭೆಯನ್ನುದ್ದೇಶಿಸಿ ಮಾತನಾಡಿದ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ| ಕೆ.ವಿ ಚಿದಾನಂದ ಅವರು, ಮಹಿಳೆಯರು ಇಂದಿನ ಕಾಲದಲ್ಲಿ ಎಲ್ಲಾ ಕ್ಷೇತ್ರಗಳಲ್ಲಿಯೂ ಉನ್ನತ ಸ್ಥಾನ ವಹಿಸುತ್ತಿದ್ದಾರೆ. ಮಹಿಳೆಯರ ಸಾಧನೆ ಮತ್ತು ಕ್ರಿಯಾಶೀಲತೆ ಮೆಚ್ಚುವಂತಹದ್ದು ಎಂದು ತಿಳಿಸಿದರು. ಇದೇ ವೇಳೆ ಮಾತನಾಡಿದ ಸ್ವಸ್ತಿಕ್ ನ್ಯಾಷನಲ್ ಸ್ಕೂಲ್ ಮಂಗಳೂರು ಪ್ರಾಂಶುಪಾಲೆ ಡಾ. ಮಾಲಿನಿ ಹೆಬ್ಬಾರ್, ‘ಮಹಿಳೆಯರು ಉನ್ನತ ಮಟ್ಟ ಮತ್ತು ಸಮಾನತೆ ಮತ್ತು ನ್ಯಾಯ ಮತ್ತು ಹಕ್ಕುಗಳ ಬಗ್ಗೆ ಅಲ್ಲದೆ ಮಹಿಳೆಯರಿಂದ ಎಲ್ಲಾ ಕಾರ್ಯಗಳು ನಡೆಯುತ್ತದೆ, ಅವಳು ಒಬ್ಬಂಟಿಯಲ್ಲ , ಪುರುಷ – ಮಹಿಳೆ ಬೇಧ ಭಾವ ನೋಡದೆ ಸಮಾಜದಲ್ಲಿ ಸಮಾನತೆಯನ್ನು ನೀಡಿ ಮಹಿಳೆಯರಿಗೆ ಬೆನ್ನೆಲುಬಾಗಿ ನಿಲ್ಲಬೇಕು ಎಂದು ತಿಳಿಸಿದರು. ಗೌರವ ಅತಿಥಿಯಾಗಿ AOLE ಉಪಾಧ್ಯಕ್ಷೆ ಶೋಭಾ ಚಿದಾನಂದ, AOLE ಪ್ರಧಾನ ಕಾರ್ಯದರ್ಶಿ ಅಕ್ಷಯ್ .ಕೆ.ಸಿ, AOLE ಕಾರ್ಯದರ್ಶಿ ಐಶ್ವರ್ಯ ಕೆ.ಸಿ, ಕೆವಿಜಿ ಮೆಡಿಕಲ್ ಕಾಲೇಜಿನ ಡೀನ್ ನೀಲಾಂಬಿಕೈ ನಟರಾಜನ್ ಉಪಸ್ಥಿತರಿದ್ದರು. ಇದೇ ವೇಳೆ ಕ್ಷೇತ್ರ ಅಭಿವೃದ್ಧಿ ಅಧಿಕಾರಿ ಮೀನಾಕ್ಷಿ ಗೌಡ, ಜಲಜಾಕ್ಷಿ ಗೌಡ ಅವರನ್ನು ಸನ್ಮಾನಿಸಲಾಯಿತು.