ನ್ಯೂಸ್ ನಾಟೌಟ್: ಕರ್ನಾಟಕ ಉಚ್ಛ ನ್ಯಾಯಾಲಯ ಖಾಲಿ ಇರುವ ಹುದ್ದೆಗಳ ಭರ್ತಿ ಮಾಡಲು ನೇಮಕ ಪ್ರಕ್ರಿಯೆ ಆರಂಭಿಸಿದೆ. ಒಟ್ಟು 39 ಚಾಲಕ ಹುದ್ದೆಗಳು ಖಾಲಿ ಇದೆ. ಆಸಕ್ತರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಯ ಕುರಿತಾದ ಹೆಚ್ಚಿನ ಮಾಹಿತಿ ಇಲ್ಲಿದೆ.
ಡ್ರೈವರ್ (ಕಲ್ಯಾಣ ಕರ್ನಾಟಕ ಪ್ರದೇಶ- ಸ್ಥಳೀಯ ಕೇಡರ್)- 2
ಡ್ರೈವರ್ (ಉಳಿದ ಪೋಷಕ ವರ್ಗ)- 37
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 06/03/2023, ಅರ್ಜಿ ಸಲ್ಲಿಸಲು ಕೊನೆಯ ದಿನ: ಏಪ್ರಿಲ್ 6, 2023 ,ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನ: ಏಪ್ರಿಲ್ 12, 2023
ವಿದ್ಯಾರ್ಹತೆ:
ಕರ್ನಾಟಕ ಉಚ್ಛ ನ್ಯಾಯಾಲಯ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ/ SSLC ಪಾಸಾಗಿರಬೇಕು.
ಕರ್ನಾಟಕ ಉಚ್ಛ ನ್ಯಾಯಾಲಯ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಏಪ್ರಿಲ್ 6, 2023ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.
SC/ST/ ಪ್ರವರ್ಗ-1 ಅಭ್ಯರ್ಥಿಗಳು- 5 ವರ್ಷ
ಪ್ರವರ್ಗ- 2ಎ/2ಬಿ/3ಎ/3ಬಿ ಅಭ್ಯರ್ಥಿಗಳು- 3 ವರ್ಷ
ಶುಲ್ಕವನ್ನು ಆನ್ಲೈನ್ ಅಥವಾ ಚಲನ್ ಮೂಲಕ ಪಾವತಿಸಬಹುದಾಗಿದ್ದು, SC/ST/ ಪ್ರವರ್ಗ-1 ಅಭ್ಯರ್ಥಿಗಳು- 250 ರೂ. OBC/ ಸಾಮಾನ್ಯ ಅಭ್ಯರ್ಥಿಗಳು- 500 ರೂ. ಪಾವತಿಸಬೇಕು.
ಅಭ್ಯರ್ಥಿಗಳಿಗೆ ಡ್ರೈವಿಂಗ್ ಟೆಸ್ಟ್ ಇರುತ್ತದೆ. ಅದರಲ್ಲಿ ಪಾಸಾದವರನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅದಕ್ಕಾಗಿ ಈ ಕೆಳಗೆ ನೀಡಿರುವ ಲಿಂಕ್ಗಳ ಮೇಲೆ ಕ್ಲಿಕ್ ಮಾಡಿ.
ಡ್ರೈವರ್ (ಕಲ್ಯಾಣ ಕರ್ನಾಟಕ ಪ್ರದೇಶ- ಸ್ಥಳೀಯ ಕೇಡರ್)- ಇಲ್ಲಿ ಕ್ಲಿಕ್ ಮಾಡಿ. ಡ್ರೈವರ್ (ಉಳಿದ ಪೋಷಕ ವರ್ಗ)- ಇಲ್ಲಿ ಕ್ಲಿಕ್ ಮಾಡಿ.