ನ್ಯೂಸ್ ನಾಟೌಟ್: ವಧು ಪಿಯುಸಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದಿದ್ದಾಳೆ ಎಂಬ ಕಾರಣಕ್ಕೆ ವರನೊಬ್ಬ ವಧುವನ್ನು ಮದುವೆಯಾಗಲು ನಿರಾಕರಿಸಿದ ಅಪರೂಪದ ಘಟನೆಯೊಂದು ಉತ್ತರ ಪ್ರದೇಶದ ಕನೌಜ್ನಲ್ಲಿ ನಡೆದಿತ್ತು.ಮದುವೆ ರದ್ದಾದ ಕಾರಣ ಪೊಲೀಸರು ಎರಡು ಕುಟುಂಬಗಳಿಗೆ ಕೌನ್ಸಿಲಿಂಗ್ ಮಾಡುವ ಮೂಲಕ ಪ್ರಕರಣ ಬಗ್ಗೆ ಕಾರಣವನ್ನು ಪತ್ತೆಮಾಡಿದ್ದಾರೆ. ಇದೀಗ ಎರಡು ಕುಟುಂಬ ಒಂದು ನಿರ್ಧಾರಕ್ಕೆ ಬಂದಿದೆ.
ವರದಿಯ ಪ್ರಕಾರ, ವಧುವಿನ ಕುಟುಂಬವು ತಮ್ಮ ವರದಕ್ಷಿಣೆ ಬೇಡಿಕೆಗಳನ್ನು ಈಡೇರಿಸದ ಕಾರಣ ವರನ ಕುಟುಂಬವು ಮದುವೆಯನ್ನು ರದ್ದುಗೊಳಿಸಿದೆ ಎಂದು ಆರೋಪಿಸಿ ವರನ ಕುಟುಂಬದ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಆದರೆ, 12ನೇ ತರಗತಿ ಅಂಕಪಟ್ಟಿಯಲ್ಲಿ ಬಾಲಕಿಗೆ ಕಡಿಮೆ ಅಂಕ ಬಂದಿದೆ ಎಂದು ತಿಳಿಸಿದ್ದರು. ಬಾಗಂವ ಗ್ರಾಮದ ರಾಮಶಂಕರ್ ಎಂಬುವವರ ಪುತ್ರ ಸೋನು ಎಂಬುವರೊಂದಿಗೆ ಮಗಳು ಸೋನಿ ಮದುವೆ ನಿಶ್ಚಯಿಸಿದ್ದು, 60 ಸಾವಿರಕ್ಕೂ ಅಧಿಕ ಹಣ ಖರ್ಚು ಮಾಡಿ ವರನಿಗೆ 15 ಸಾವಿರ ಮೌಲ್ಯದ ಬಂಗಾರದ ಉಂಗುರವನ್ನೂ ನೀಡಿ ಸಮಾರಂಭ ಏರ್ಪಡಿಸಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ. ಮರುದಿನವೇ ವರನ ಮನೆಯವರು ವರದಕ್ಷಿಣೆ ಬೇಡಿಕೆ ಮುಂದಿಟ್ಟಿದ್ದಾರೆ ಎಂದು ಆರೋಪಿಸಿದರು. ವಧುವಿನ ತಂದೆ ಹೆಚ್ಚಿನ ವರದಕ್ಷಿಣೆ ನೀಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.ವರನ ಕುಟುಂಬವು ಹುಡುಗಿ 12ನೇ ತರಗತಿಯಲ್ಲಿ ಕಡಿಮೆ ಅಂಕ ಪಡೆದಿದ್ದಾಳೆ ಎಂದು ಹೇಳಿ ಮದುವೆ ಮುರಿದುಕೊಂಡಿದ್ದಾರೆ. ಇದರಿಂದಾಗಿ ವಧುವಿನ ತಂದೆ ಪೊಲೀಸರ ಸಹಾಯಕ್ಕೆ ಮೊರೆ ಹೋಗಿದ್ದರು.