ಸುಳ್ಯ: ಕಾಂಗ್ರೆಸ್ ಜಿಲ್ಲಾ ಪಂಚಾತ್ ಮಾಜಿ ಸದಸ್ಯೆಗೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸುಳ್ಯ ಬಿಜೆಪಿ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ ಸೇರಿದಂತೆ ಒಟ್ಟು 14 ಮಂದಿಗೆ ಸುಳ್ಯ ನ್ಯಾಯಾಲಯ ಜೈಲು ಶಿಕ್ಷೆಯ ತೀರ್ಪು ನೀಡಿದೆ.
ಏನಿದು ಘಟನೆ?
2014 ರ ಚುನಾವಣೆ ಸಂದರ್ಭದಲ್ಲಿ ಮರ್ಕಂಜದ ಕುದ್ಕುಳಿ ಎಂಬಲ್ಲಿ ಅಂದಿನ ಜಿಲ್ಲಾ ಪಂಚಾಯತ್ ಸದಸ್ಯೆಯಾಗಿದ್ದ ಕಾಂಗ್ರೆಸ್ ನಾಯಕಿ ಸರಸ್ವತಿ ಕಾಮತ್ ಅವರ ಮೇಲೆ ಹರೀಶ್ ಕಂಜಿಪಿಲಿ ಸೇರಿದಂತೆ ಒಟ್ಟು 14 ಮಂದಿ ಹಲ್ಲೆ ನಡೆಸಿದ್ದರು ಎನ್ನುವ ದೂರು ದಾಖಲಾಗಿತ್ತು. ಮದುವೆ ಕಾರ್ಯಕ್ರಮಕ್ಕೆ ತೆರಳಿದ್ದ ಸರಸ್ವತಿ ಕಾಮತ್ ಅವರ ಸೀರೆ ಎಳೆದು, ಗುಪ್ತಾಂಗಕ್ಕೆ ಒದ್ದು ಜೀವ ಬೆದರಿಕೆ ಹಾಕಿದ್ದರು ಎಂದು ತಿಳಿಸಲಾಗಿತ್ತು. ಈ ಕುರಿತು ಪೊಲೀಸ್ ದೂರು ನೀಡಿದ್ದ ಸರಸ್ವತಿ ಕಾಮತ್ ಆರೋಪಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದ್ದರು. ಈ ದೂರನ್ನು ಸ್ವೀಕರಿಸಿ ಅಂದಿನ ಎಸ್ ಐ ರವಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಇದೀಗ ವಿಚಾರಣೆ ನಡೆದು ಆರೋಪಿಗಳಿಗೆ ಜೈಲು ಶಿಕ್ಷೆ ಹಾಗೂ ದಂಡ ಘೋಷಿಸಲಾಗಿದೆ.