ನ್ಯೂಸ್ ನಾಟೌಟ್: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಮಾರ್ಚ್ ೧೮ಕ್ಕೆ ಕೊಡಗು ಜಿಲ್ಲೆಗೆ ಆಗಮಿಸಿದ್ದು, ಚುನಾವಣಾ ಹೊಸ್ತಿಲಲ್ಲಿ ಬಿಜೆಪಿ ಕಾರ್ಯಕರ್ತರಲ್ಲಿ ಉತ್ಸಾಹ ತುಂಬಿದ್ದಾರೆ. ಮಧ್ಯಾಹ್ನದಿಂದ ಸಂಜೆಯವರೆಗೂ ಜಿಲ್ಲೆಯಲ್ಲಿಯೇ ಇದ್ದು, ಎರಡು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಮಡಿಕೇರಿಯಲ್ಲಿ ಮುಖ್ಯಮಂತ್ರಿಗಳ ಕಾರ್ಯಕ್ರಮಕ್ಕಾಗಿ ಬೃಹತ್ ವೇದಿಕೆ ನಿರ್ಮಾಣವಾಗಿದ್ದು, ಇಲ್ಲಿನ ಗಾಂಧಿ ಮೈದಾನದಲ್ಲಿ ಜಿಲ್ಲಾಡಳಿತದಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಯ ಫಲಾನುಭವಿಗಳ ಸಮ್ಮೇಳನ ಹಾಗೂ ಮಡಿಕೇರಿ ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಸಮಾರಂಭವು ನಡೆಯಿತು.
ಮುಖ್ಯಮಂತ್ರಿಯವರು ಹೆಲಿಕಾಪ್ಟರ್ ಮೂಲಕ ಇಲ್ಲಿನ ಗಾಲ್ಫ್ ಮೈದಾನಕ್ಕೆ ಮಧ್ಯಾಹ್ನ 12.05ಕ್ಕೆ ಬಂದಿಳಿದರು. ಅಲ್ಲಿಂದ ರಸ್ತೆ ಮೂಲಕ 12.15ಕ್ಕೆ ಸಮಾವೇಶದಲ್ಲಿ ಭಾಗವಹಿಸಿದ್ದು ಜಿಲ್ಲೆಯ ವಿವಿಧ ಕಡೆಗಳಿಂದ ಸಾಕಷ್ಟು ಫಲಾನುಭವಿಗಳು ಆಗಮಿಸಲಿದ್ದು, ಇವರನ್ನು ಕರೆತರುವುದಕ್ಕೆಂದೇ ಕೆಎಸ್ಆರ್ ಟಿಸಿ ಬಸ್ಗಳ ವ್ಯವಸ್ಥೆಯನ್ನೂ ಮಾಡಲಾಗಿದೆ. ಮಧ್ಯಾಹ್ನ 3.10ಕ್ಕೆ ನಾಪೋಕ್ಲು ಬೇತು ಗ್ರಾಮದ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ (ಚೆರಿಯಪರಂಬು) ಅಪ್ಪಚೆಟ್ಟೋಳಂಡ ಕುಟುಂಬಸ್ಥರ ಪ್ರಾಯೋಜಕತ್ವದಲ್ಲಿ ನಡೆಯುವ 23ನೇ ‘ಕೊಡವ ಹಾಕಿ ಉತ್ಸವ’ಕ್ಕೆ ಚಾಲನೆ ನೀಡಿದ್ದಾರೆ.