ನ್ಯೂಸ್ನಾಟೌಟ್: ಭಾರತದಲ್ಲಿ ಭಾನುವಾರ ಮಾರ್ಚ್ 19 ರಂದು ಒಂದು ಸಾವಿರಕ್ಕೂ ಹೆಚ್ಚು ಹೊಸ ಕೋವಿಡ್ -19 ಪ್ರಕರಣಗಳು ವರದಿಯಾಗಿದೆ. ದೇಶದ ಆರು ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ವೈರಲ್ ಸೋಂಕಿನ ಹಠಾತ್ ಹೆಚ್ಚಳವನ್ನು ನಿಯಂತ್ರಿಸುವತ್ತ ಗಮನಹರಿಸಬೇಕು ಎಂದು ಕೇಂದ್ರ ಸರ್ಕಾರವು ಕರ್ನಾಟಕ ಸೇರಿ ಆರು ರಾಜ್ಯಗಳಿಗೆ ಪತ್ರ ಬರೆದಿದೆ.
129 ದಿನಗಳ ನಂತರ ಭಾರತದಲ್ಲಿ ದೈನಂದಿನ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆ ಸಾವಿರ ದಾಟಿದೆ. ಮಾರ್ಚ್ ೧೯ರ ಬೆಳಿಗ್ಗೆ 8 ಗಂಟೆಗೆ ಅಪ್ಡೇಟ್ ಆದ ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ, 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ ಒಟ್ಟು 1,071 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ.
ಇದೇ ವೇಳೆ ಮೂರು ಕೋವಿಡ್ ಸೋಂಕಿತರು ಸಾವನ್ನಪ್ಪಿದ್ದು, ಒಟ್ಟು ಸಾವಿನ ಸಂಖ್ಯೆ 5,30,802 ಕ್ಕೆ ಏರಿದೆ. ಮೂರು ಸಾವು ಪ್ರಕರಣಗಳು ರಾಜಸ್ಥಾನ ಮತ್ತು ಮಹಾರಾಷ್ಟ್ರ ಮತ್ತು ಕೇರಳದಲ್ಲಿ ತಲಾ ಒಂದರಂತೆ ವರದಿಯಾಗಿದೆ.
ದೇಶದ ಆರು ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ವೈರಲ್ ಸೋಂಕಿನ ಹಠಾತ್ ಹೆಚ್ಚಳವನ್ನು ನಿಯಂತ್ರಿಸುವತ್ತ ಗಮನಹರಿಸಬೇಕು ಎಂದು ಕೇಂದ್ರ ಸರ್ಕಾರವು ಕರ್ನಾಟಕ ಸೇರಿ ಆರು ರಾಜ್ಯಗಳಿಗೆ ಪತ್ರ ಬರೆದಿದೆ. ಕೇಂದ್ರ ಆರೋಗ್ಯ ಕಾರ್ಯದರ್ಶಿಗಳು ಕೊರೊನಾ ಪ್ರಕರಣಗಳು ಏರಿಕೆಯಾಗುತ್ತಿರುವ ಮಹಾರಾಷ್ಟ್ರ, ಗುಜರಾತ್, ತೆಲಂಗಾಣ, ತಮಿಳುನಾಡು, ಕೇರಳ ಮತ್ತು ಕರ್ನಾಟಕಕ್ಕೆ ಪತ್ರ ಬರೆದು ಪರೀಕ್ಷೆ, ಚಿಕಿತ್ಸೆ, ಟ್ರ್ಯಾಕಿಂಗ್ ಮತ್ತು ಲಸಿಕೆಗೆ ಒತ್ತು ನೀಡುವಂತೆ ಸೂಚಿಸಿದ್ದಾರೆ.
ಸಚಿವಾಲಯದ ವೆಬ್ಸೈಟ್ ಪ್ರಕಾರ, ರಾಷ್ಟ್ರವ್ಯಾಪಿ ಕೋವಿಡ್ ವೈರಸ್ ವ್ಯಾಕ್ಸಿನೇಷನ್ ಅಭಿಯಾನದಲ್ಲಿ ಇದುವರೆಗೆ ದೇಶದಲ್ಲಿ ಕೋವಿಡ್ -19 ಲಸಿಕೆಯ 220.65 ಕೋಟಿ ಡೋಸ್ ಗಳನ್ನು ನೀಡಲಾಗಿದೆ.