ನ್ಯೂಸ್ ನಾಟೌಟ್: ಬಾಂಗ್ಲಾದೇಶದ ಮದರಿಪುರದ ಶಿಬ್ಚಾರ್ ಉಪಜಿಲಾದಲ್ಲಿ ಬಸ್ ಪಲ್ಟಿಯಾಗಿ ಕಂದಕಕ್ಕೆ ಉರುಳಿದ ಪರಿಣಾಮ ಕನಿಷ್ಠ 17 ಮಂದಿ ಮೃತಪಟ್ಟು,30 ಮಂದಿ ಗಾಯಗೊಂಡಿರುವ ಘಟನೆ ಮಾರ್ಚ್ ೧೯ರಂದು ನಡೆದಿದೆ.
ಮದರಿಪುರದ ಶಿಬ್ಚಾರ್ ನ ಉಪಜಿಲ್ಲಾದಲ್ಲಿ ಢಾಕಾಗೆ ತೆರಳುತ್ತಿದ್ದ ಬಸ್ ಸೇತುವೆಯ ಸಮೀಪವಿರುವ ರಸ್ತೆಯಿಂದ ಪಲ್ಟಿಯಾಗಿ ಕಂದಕಕ್ಕೆ ಉರುಳಿದೆ. ಘಟನೆಯಲ್ಲಿ ಕನಿಷ್ಠ 17 ಮಂದಿ ಮೃತಪಟ್ಟಿದ್ದಾರೆ. 30 ಮಂದಿ ಗಾಯಗೊಂಡಿದ್ದಾರೆ ಎಂದು ವರದಿ ತಿಳಿಸಿದೆ.
ಬಸ್ಸಿನ ಚಕ್ರ ಪಂಚರ್ ಆದ ಕಾರಣ ಚಾಲಕ ನಿಯಂತ್ರಣ ಕಳೆದುಕೊಂಡು ಬಸ್ ಕಂದಕಕ್ಕೆ ಉರುಳಿ ಬಿದ್ದಿದೆ ಎಂದು ಪ್ರಾಥಮಿಕ ತನಿಖಾ ವರದಿ ತಿಳಿಸಿದ್ದು, ಅಗ್ನಿಶಾಮಕ ದಳ ಮತ್ತು ಪೊಲೀಸರು ಸ್ಥಳೀಯರ ಸಹಕಾರದಿಂದ ರಕ್ಷಣಾ ಕಾರ್ಯಾಚರಣೆ ಮುಂದುವರಿಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.