ಕರಾವಳಿ

ಮುಂದಿನ 48 ಗಂಟೆಗಳಲ್ಲಿ ದಕ್ಷಿಣ ಕನ್ನಡ ಸೇರಿ ಕರಾವಳಿ ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆಯ ಮುನ್ಸೂಚನೆ !

63
Spread the love

ನ್ಯೂಸ್ ನಾಟೌಟ್: ರಾಜ್ಯದ ಕೆಲವು ಕರಾವಳಿ ಜಿಲ್ಲೆಗಳಲ್ಲಿ ಮಾರ್ಚ್ 21ರಿಂದ ಆಲಿಕಲ್ಲು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಮೇಲ್ಮೈ ಸುಳಿಗಾಳಿಯ ಪರಿಣಾಮ ರಾಜ್ಯದ ಕೊಡಗು, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ತುಮಕೂರು, ಬೀದರ್, ಬೆಳಗಾವಿ, ಬಾಗಲಕೋಟೆ, ಯಾದಗಿರಿ ಹಾಗೂ ಕಲಬುರ್ಗಿ ಜಿಲ್ಲೆಯಲ್ಲಿ ಮುಂದಿನ ಎರಡು ದಿನ ಗುಡುಗು ಸಹಿತ ಆಲಿಕಲ್ಲು ಮಳೆಯಾಗಲಿದೆ ಎಂಬುದಾಗಿ ಮುನ್ಸೂಚನೆ ನೀಡಿದೆ ಎಂದು ವರದಿ ತಿಳಿಸಿದೆ.

ಕಳೆದ ಭಾನುವಾರ ಮಾರ್ಚ್ ೧೯ ರಂದು ಮೈಸೂರು, ತುಮಕೂರು,ಉಡುಪಿ, ಬಳ್ಳಾರಿ, ಚಾಮರಾಜನಗರ ಜಿಲ್ಲೆಯ ಕೆಲವು ಭಾಗಗಳಲ್ಲಿ ಆಲಿಕಲ್ಲು ಸಹಿತ ಮಳೆಯಾಗಿದೆ. ಈ ಬೆನ್ನಲ್ಲೇ ಕರ್ನಾಟಕದಲ್ಲಿ ಮುಂದಿನ 48 ಗಂಟೆಗಳಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

See also  ಸುಳ್ಯ: ಗಣೇಶ ಹಬ್ಬದ ಪ್ರಯುಕ್ತ ಮದ್ಯದ ಬಾಟಲಿ ಗೆಲ್ಲುವ ಲಾಟರಿ ಟಿಕೆಟ್ ಫೋಟೋ ವೈರಲ್..! ಕಠಿಣ ಕ್ರಮಕ್ಕೆ ವಿಶ್ವ ಹಿಂದೂ ಪರಿಷದ್, ಬಜರಂಗದಳ ಆಗ್ರಹ
    Ad Widget   Ad Widget