ನ್ಯೂಸ್ ನಾಟೌಟ್: ಸುಳ್ಯ ನಗದ ಶಾಲಾ, ಕಾಲೇಜು ಸಮೀಪದಲ್ಲಿ ನಿಯಮ ಉಲ್ಲಂಘಿಸಿ ತಂಬಾಕು ಮತ್ತು ಗುಟ್ಕಾ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಮಂಗಳವಾರ ಪೊಲೀಸರು ದಾಳಿ ನಡೆಸಿ ತಂಬಾಕು ಉತ್ಪನ್ನಗಳನ್ನು ವಶಕ್ಕೆ ಪಡೆದಿದ್ದಾರೆ.
ಇಲಾಖೆಯ ಸುತ್ತೋಲೆ ಪ್ರಕಾರ ಶಾಲೆ ಮತ್ತು ಕಾಲೇಜುಗಳ 500 ಮೀಟರ್ ಅಂತರದಲ್ಲಿ ಸಿಗರೇಟ್ ಮತ್ತು ಗುಟ್ಕಾ ಮಾರಾಟ ಮಾಡುವಂತಿಲ್ಲ. ಆದರೆ ಕೆಲವರು ನಿಯಮ ಉಲ್ಲಂಘಿಸಿ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿದ್ದರು.
ಕೆ.ವಿ.ಜಿ ಜಂಕ್ಷನ್, ಜ್ಯೋತಿ ಸರ್ಕಲ್, ಜಟ್ಟಿಪಳ್ಳ, ಗಾಂಧೀನಗರ ಸೇರಿದಂತೆ ನಗರದ ಹಲವು ಕಡೆ ದಾಳಿ ನಡೆಸಲಾಗಿದೆ. ಕಾರ್ಯಾಚರಣೆಯಲ್ಲಿ ಹತ್ತಕ್ಕೂ ಅಧಿಕ ಅಂಗಡಿಗಳಲ್ಲಿ ತಂಬಾಕು ಉತ್ಪನ್ನ ಲಭಿಸಿದ್ದು, ಅವುಗಳನ್ನು ಪೊಲೀಸರು ವಶಪಡಿಸಿ ಪ್ರಕರಣ ದಾಖಲಿಸಿ ಅಂಗಡಿ ಮಾಲೀಕರಿಗೆ ದಂಡ ವಿಧಿಸಲಾಗಿದೆ. ಹಿರಿಯ ಅಧಿಕಾರಿಗಳ ಸೂಚನೆಯಂತೆ ಸುಳ್ಯ ವೃತ್ತ ನಿರೀಕ್ಷಕ ರವೀಂದ್ರ ಮಾರ್ಗದರ್ಶನದಲ್ಲಿ ಠಾಣಾಧಿಕಾರಿ ದಿಲೀಪ್ ಕುಮಾರ್ ಹಾಗೂ ಸಿಬ್ಬಂದಿವರ್ಗ ಕಾರ್ಯಾಚರಣೆ ನಡೆಸಿದ್ದರು.