ನ್ಯೂಸ್ ನಾಟೌಟ್ : ಸುಳ್ಯದ ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 10 ದಿನದ ಸಂಸ್ಕೃತ ಸಂಭಾಷಣಾ ಶಿಬಿರದ ಉದ್ಘಾಟನೆ ಸೋಮವಾರ ಕಾಲೇಜಿನ ಸುಶ್ರುತ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲ ಡಾ. ಲೀಲಾಧರ ಡಿ ವಿ ಉದ್ಘಾಟಿಸಿ ಶುಭ ಹಾರೈಸಿದರು. ಶಿಬಿರವನ್ನು ಸಂಸ್ಕೃತ ಭಾರತೀ ಕಾಸರಗೋಡು ಮಂಗಳೂರು ಗ್ರಾಮಾಂತರ ವಿಭಾಗದ ಪ್ರಶಿಕ್ಷಕಿ ಸಂಧ್ಯಾ ಕುಮಾರಿ ಕುಂಟಾರು ಇವರು ಪ್ರಥಮ ವರ್ಷದ ಬಿ.ಎ.ಎಂ.ಎಸ್ ವಿದ್ಯಾರ್ಥಿಗಳಿಗೆ ನಡೆಸಿಕೊಟ್ಟರು.
ವಿದ್ಯಾರ್ಥಿಗಳಾದ ಕೇತನ ಆಚಾರ್ ಸ್ವಾಗತಿಸಿ, ತನ್ವಿ ಬನ್ಸ್ಖೋ ವಂದಿಸಿ, ಅನುಶ್ರೀ ಐ ಕೆ ಮತ್ತು ಬಳಗ ಪ್ರಾರ್ಥಿಸಿ, ಸಮರ್ಥ ಅರಳಿ ಹಾಗೂ ಸನ್ನಿಧಿ ಎನ್ ನಿರೂಪಿಸಿದರು. ಈ ಸಂದರ್ಭ ಕಾಲೇಜಿನ ಅಕಾಡೆಮಿಕ್ ಕೊ ಆರ್ಡಿನೇಟರ್ ಡಾ. ಕವಿತಾ ಬಿ ಎಂ, ಸಂಹಿತ ಸಿದ್ಧಾಂತ ವಿಭಾಗದ ಮುಖ್ಯಸ್ಥೆ ಡಾ. ಶ್ರೀಜ ಎಸ್, ಸಂಸ್ಕೃತ ಉಪನ್ಯಾಸಕರಾದ ಶಶಿಕಲಾ ದೇರ್ಲ, ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.













