ನ್ಯೂಸ್ನಾಟೌಟ್: ರಾಹುಲ್ ಗಾಂಧಿ ವಿರುದ್ಧ 2019ರಲ್ಲಿ ದಾಖಲಾದ ಮಾನನಷ್ಟ ಮೊಕದ್ದಮೆ ಪ್ರಕರಣ ಕುರಿತು ಗುರುವಾರ ತೀರ್ಪು ನೀಡಿದ ಗುಜರಾತ್ ಹೈಕೋರ್ಟ್ ರಾಹುಲ್ ತಪ್ಪಿತಸ್ಥರು ಎಂದಿದೆ. ಈ ಸಂಬಂಧ 2 ವರ್ಷ ಜೈಲು ಅಥವಾ ದಂಡ ಪಾವತಿಯ ಶಿಕ್ಷೆ ವಿಧಿಸಿದೆ.
ಬಿಜೆಪಿ ಶಾಸಕ ಮತ್ತು ಗುಜರಾತ್’ನ ಮಾಜಿ ಸಚಿವ ಪೂರ್ಣೇಶ್ ಮೋದಿ ಅವರು ನೀಡಿದ ದೂರಿನ ಮೇರೆಗೆ ಈ ಪ್ರಕರಣ ದಾಖಲಾಗಿತ್ತು. “ಎಲ್ಲಾ ಕಳ್ಳರು ಮೋದಿ ಎಂಬ ಸಾಮಾನ್ಯ ಉಪನಾಮವನ್ನು ಹೇಗೆ ಹೊಂದಿದ್ದಾರೆ?” ಎಂದು ರಾಹುಲ್ ಗಾಂಧಿ 2019 ರ ಲೋಕಸಭಾ ಚುನಾವಣೆಗೆ ಮುಂಚಿತವಾಗಿ ಕರ್ನಾಟಕದ ಕೋಲಾರದಲ್ಲಿ ಏರ್ಪಡಿಸಿದ್ದ ರಾಲಿಯನ್ನುದ್ದೇಶಿಸಿ ಮಾತನಾಡುವಾಗ ಈ ಹೇಳಿಕೆ ನೀಡಿದ್ದರು.
ಮೋದಿ ವಿರುದ್ಧದ ಹೇಳಿಕೆ ನೀಡಿದ ವಿಚಾರಕ್ಕೆ ಸಂಬಂಧಪಟ್ಟಂತೆ ಇಂದು ಸೂರತ್ ನ್ಯಾಯಲಯಾಲಯದ ಮುಂದೆ ರಾಹುಲ್ ಗಾಂಧಿ ಹಾಜರಾಗಿದ್ದರು. 2019ರಲ್ಲಿ ಮೋದಿ ಉಪನಾಮದ ಕುರಿತು ರಾಹುಲ್ ಗಾಂಧಿ ಹೇಳಿಕೆ ನೀಡಿದ್ದರು. ಕಳ್ಳರೆಲ್ಲರೂ ಏಕೆ ಮೋದಿ ಎಂಬ ಉಪನಾಮವನ್ನೇ ಇಟ್ಟುಕೊಂಡಿದ್ದಾರೆ ಎಂದು ರಾಗಾ ಪ್ರಶ್ನೆ ಮಾಡಿದ್ದರು. ಕರ್ನಾಟಕದ ಕೋಲಾರದಲ್ಲಿ 2019ರ ಲೋಕಸಭಾ ಚುನಾವಣೆಯ ಪ್ರಚಾರದ ಸಮಯದಲ್ಲಿ ಮೋದಿ ಉಪನಾಮದ ಬಗ್ಗೆ ರಾಹುಲ್ ಗಾಂಧಿ ಹೇಳಿಕೆ ನೀಡಿದ್ದರು. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಇಂದು ಸೂರತ್ ನ್ಯಾಯಾಲಯದ ಮುಂದೆ ರಾಹುಲ್ ಗಾಂಧಿ ಹಾಜರಾಗಿದ್ದರು. ಮೋದಿ ಉಪನಾಮದ ಬಗ್ಗೆ ಕಾಮೆಂಟ್ ಮಾಡಿದ್ದಕ್ಕಾಗಿ ರಾಹುಲ್ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲು ಮಾಡಲಾಗಿತ್ತು.
ಚೀಫ್ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ಹೆಚ್.ಹೆಚ್ ವರ್ಮಾ ನ್ಯಾಯಾಲಯವು ಅವರಿಗೆ ಐಪಿಸಿ ಸೆಕ್ಷನ್ 499 (ಮಾನನಷ್ಟ), 500 (ಮಾನಹಾನಿಗಾಗಿ ಶಿಕ್ಷೆ) ಅಡಿಯಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆ ಮತ್ತು 15,000 ರೂಪಾಯಿ ದಂಡ ವಿಧಿಸಲಾಗಿದೆ. ಈ ಪ್ರಕರಣದಲ್ಲಿ ಜಾಮೀನು ಕೂಡ ಪಡೆದಿದ್ದಾರೆ. ರಾಹುಲ್ ಗಾಂಧಿಯವರ ಮನವಿಯ ಮೇರೆಗೆ, ಅವರ ಶಿಕ್ಷೆಯನ್ನು ಅಮಾನತುಗೊಳಿಸಲಾಗಿದೆ, ಅವರಿಗೆ 30 ದಿನಗಳೊಳಗೆ ಕೋರ್ಟ್ ತನ್ನನ್ನು ಅಪರಾಧಿ ಎಂದು ನೀಡಿರುವ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ಅನುವು ಮಾಡಿಕೊಡುತ್ತದೆ.