ನ್ಯೂಸ್ ನಾಟೌಟ್: ದಕ್ಷಿಣಕನ್ನಡ ಮತ್ತು ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ 23 ಪ್ರಕರಣಗಳಲ್ಲಿ ಬೇಕಾಗಿದ್ದ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಯನ್ನು ಕೃಷ್ಣಾಪುರ, ಕಾಟಿಪಳ್ಳ ಗ್ರಾಮದ ನಿವಾಸಿ ಅಜರುದ್ದೀನ್ ಅಲಿಯಾಸ್ ಅಜರ್ (ನಾಥು)(29) ಎಂದು ಗುರುತಿಸಲಾಗಿದೆ. ಹಲವು ಪ್ರಕರಣಗಳಲ್ಲಿ ಬೇಕಾಗಿದ್ದ ಈನ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ನಾಪತ್ತೆಯಾಗಿದ್ದ. ಈತನ ಮೇಲೆ ಜಾಮೀನು ರಹಿತ ವಾರಂಟ್ ಇದೆ.
ಪ್ರಕರಣದ ಬಗ್ಗೆ ಮಂಗಳೂರು ಪೊಲೀಸ್ ಆಯುಕ್ತರ ಆದೇಶದ ಮೇರೆಗೆ ಮಂಗಳೂರು ಉತ್ತರ ಉಪವಿಭಾಗದ ಸಹಾಯಕ ಆಯುಕ್ತರಾದ ಮನೋಜ್ ಕುಮಾರ್ ನಿರ್ದೇಶನದಂತೆ ಬುಧವಾರ (ಮಾರ್ಚ್ 22) ಸುರತ್ಕಲ್ ಪೊಲೀಸ್ ಠಾಣೆಯ ನಿರೀಕ್ಷಕ ಮಹೇಶ್ ಪ್ರಸಾದ್ ನೇತೃತ್ವದಲ್ಲಿ, ಉಪನಿರೀಕ್ಷಕ ಮಲ್ಲಿಕಾರ್ಜುನ್, ಸಿಬ್ಬಂದಿ ಅಜಿತ್ ಮ್ಯಾಥ್, ಮಣಿಕಂಠ, ಕಾರ್ತಿಕ್ ಅವರ ತಂಡ ಆರೋಪಿಯನ್ನು ಬಂಧಿಸಿದೆ.