ನ್ಯೂಸ್ ನಾಟೌಟ್: ಟಿಪ್ಪರ್ ಮತ್ತು ಆಟೋ ರಿಕ್ಷಾ ನಡುವೆ ಭೀಕರ ಅಪಘಾತವಾಗಿ ರಿಕ್ಷಾ ಚಾಲಕ ಗಾಯಗೊಂಡಿರುವ ಘಟನೆ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಾವು ಎಂಬಲ್ಲಿ ಮಾರ್ಚ್ 23ರಂದು ನಡೆದಿದೆ.
ಪುತ್ತೂರು ಕಡೆಯಿಂದ ಸುಳ್ಯ ಕಡೆ ಹೋಗುತ್ತಿದ್ದ ಕಾವು ನಿವಾಸಿ ಬಶೀರ್ ಎಂಬವರ ಆಟೋ ರಿಕ್ಷಾಗೆ ಟಿಪ್ಪರ್ ಲಾರಿಯೊಂದು ಡಿಕ್ಕಿ ಹೊಡೆದಿದ್ದು ಚಾಲಕ ಬಶೀರ್ಗೆ ಗಾಯಗಳಾಗಿದೆ.
ಡಿಕ್ಕಿಯಾದ ರಭಸಕ್ಕೆ ರಿಕ್ಷಾ ಸಂಪೂರ್ಣ ಜಖಂಗೊಂಡಿದೆ. ಕೂಡಲೇ ಅವರನ್ನು ಸುಳ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿ ತಿಳಿಸಿದೆ.