ನ್ಯೂಸ್ ನಾಟೌಟ್:ತೀವ್ರವಾದ ಉಸಿರಾಟ ತೊಂದರೆ ಮತ್ತು ಎದೆ ನೋವು ಕಾಣಿಸಿಕೊಂಡು ಯುವಕನೋರ್ವ ಆಸ್ಪತ್ರೆಗೆ ದಾಖಲಾಗಿ ಮೃತಪಟ್ಟ ಘಟನೆ ವರದಿಯಾಗಿದೆ.ಪಂಜ ಸಮೀಪದ ಪಂಬೆತ್ತಾಡಿ ಗ್ರಾಮದ ಎದುರು ಮಜಲು ಮಹಾಲಿಂಗ ನಾಯ್ಕ್ ಮತ್ತು ಶ್ರೀಮತಿ ಮಾಲತಿ (ಗೀತಾ)ದಂಪತಿ ಪುತ್ರ ಜಗದೀಶ್ (33) ಮೃತ ಯುವಕ.
ಕಳೆದ ಎರಡು ದಿನಗಳ ಹಿಂದೆ ಎದೆನೋವು ಕಾಣಿಸಿ ಕೊಂಡು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದರು.ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಾ.23 ರಂದು ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ.ಮಾ.21 ರಂದು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಿಸಲಾಯಿತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮಾ.23ರಂದು ಕೊನೆಯುಸಿರೆಳೆದಿದ್ದಾರೆ.
ಮೃತರು ಅವಿವಾಹಿತರಾಗಿದ್ದು.ತಂದೆ, ತಾಯಿ,ಸಹೋದರ ಪ್ರಶಾಂತ್, ಸಹೋದರಿ ಶ್ರೀಮತಿ ಭವ್ಯ, ಕುಟುಂಬಸ್ಥರು, ಬಂಧುಮಿತ್ರರನ್ನು ಅಗಲಿದ್ದಾರೆ.