21.6 C
Sullia
Sunday, March 8, 2026

ಕೊಡಗಿನ ಇತಿಹಾಸದಲ್ಲೇ ಐತಿಹಾಸಿಕ ತೀರ್ಪು ಪ್ರಕಟ: ನಾಲ್ವರನ್ನು ಹತ್ಯೆಗೈದಿದ್ದ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಿದ ಕೋರ್ಟ್

ನ್ಯೂಸ್ ನಾಟೌಟ್ :  ನಾಲ್ವರನ್ನು ಹತ್ಯೆಗೈದಿದ್ದ ಆರೋಪಿಗೆ ಕೋರ್ಟ್‌ ಗಲ್ಲು ಶಿಕ್ಷೆ ವಿಧಿಸಿದೆ.ಕೊಡಗು (Kodagu) ಜಿಲ್ಲೆಯ ಇತಿಹಾಸದಲ್ಲಿ ಮೊದಲ ಬಾರಿಗೆ ಈ ತೀರ್ಪು ನೀಡಲಾಗಿದೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಪೊನ್ನಂಪೇಟೆ ತಾಲೂಕಿನ ಬೇಗೂರು ಗ್ರಾಮದಲ್ಲಿ ಒಂದೇ ಕುಟುಂಬದ ನಾಲ್ವರನ್ನ ಹತ್ಯೆಗೈದಿದ್ದ ಆರೋಪಿಗೆ ವಿರಾಜಪೇಟೆ ಸೆಷನ್ಸ್‌ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿ ಐತಿಹಾಸಿಕ ತೀರ್ಪು ನೀಡಿದೆ. ಕೇರಳ ಮೂಲದ ಆರೋಪಿ ಗಿರೀಶ್ ಎಂಬಾತನಿಗೆ ಈ ಮರಣದಂಡನೆ ವಿಧಿಸಿದೆ.

ಏನಿದು ಪ್ರಕರಣ?
2024 ರಲ್ಲಿ ಪೊನ್ನಂಪೇಟೆ ತಾಲೂಕಿನ ಬೇಗೂರು ಗ್ರಾಮದ ಕೊಳತೋಡು ಎಂಬಲ್ಲಿ ಒಂದೇ ಕುಟುಂಬದ ನಾಲ್ವರನ್ನು ಕೇರಳ ಮೂಲದ ಗಿರೀಶ್ (37) ಬರ್ಬರವಾಗಿ ಹತ್ಯೆ ಮಾಡಿದ್ದ. ಮೃತಪಟ್ಟವರನ್ನ ನಾಗಿ (35), ಆಕೆಯ ಮಗಳು ಕಾವೇರಿ (7) ಹಾಗೂ ನಾಗಿಯ ಅಜ್ಜ-ಅಜ್ಜಿ ಕರಿಯ (75) ಮತ್ತು ಗೌರಿ (70) ಎಂದು ಗುರುತಿಸಲಾಗಿತ್ತು. ಆರೋಪಿ ಗಿರೀಶ್ ಕತ್ತಿಯಿಂದ ನಾಲ್ವರನ್ನೂ ಕೊಚ್ಚಿ ಕೊಲೆಗೈದು ಪರಾರಿಯಾಗಿದ್ದ. 

ಈ ಮಹತ್ವದ ಪ್ರಕರಣದಲ್ಲಿ ಹಿರಿಯ ವಕೀಲರಾದ ಯಾಸೀನ್ ಅವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು. ಎಲ್ಲಾ ಸಾಕ್ಷ್ಯ ಮತ್ತು ವಾದ-ಪ್ರತಿವಾದ ಪರಿಶೀಲಿಸಿದ ಬಳಿಕ ವಿರಾಜಪೇಟೆ ಸೆಷನ್ಸ್ ನ್ಯಾಯಾಲಯವು, ಆರೋಪಿ ಗಿರೀಶ್‌ನ ಅಪರಾಧವು ಗಂಭೀರ ಸ್ವರೂಪದ್ದು ಎಂದು ಪರಿಗಣಿಸಿ, ಗಲ್ಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ

Related Articles

LEAVE A REPLY

Please enter your comment!
Please enter your name here

Latest Articles