ನ್ಯೂಸ್ ನಾಟೌಟ್: ತುಂಬು ಗರ್ಭಿಣಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದ ವೇಳೆ ಆಟೋದಲ್ಲಿಯೇ ಮಗುವಿಗೆ ಜನ್ಮ ನೀಡಿದ ಘಟನೆ ಕಡಬದಲ್ಲಿ ನಡೆದಿದೆ.
ಆಲಂಕಾರು ಸಮೀಪದ ಮಣಿಕ್ಕಲದ ತುಂಬು ಗರ್ಭಿಣಿ ತನ್ನ ಪತಿಯ ಜತೆ ಬಲ್ಯದ ತನ್ನ ಕುಟುಂಬಸ್ಥರ ಮನೆಗೆ ಬಂದಿದ್ದರು. ಸಂಜೆ ವೇಳೆ ಅವರಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ಆಟೋದಲ್ಲಿ ಕಡಬದ ಸಮುದಾಯ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು.ಇನ್ನೇನು ಆಸ್ಪತ್ರೆಗೆ ತಲುಪಿ ಒಳಗಡೆ ಕರೆದುಕೊಂಡು ಹೋಗಬೇಕು ಎನ್ನುವಷ್ಟರಲ್ಲಿ ಆಸ್ಪತ್ರೆಯ ಮುಂಭಾಗವೇ ಆಟೋದಲ್ಲೇ ಗಂಡು ಮಗುವಿಗೆ ತಾಯಿ ಜನ್ಮ ನೀಡಿದ್ದಾರೆ. ಕೂಡಲೇ ಆಸ್ಪತ್ರೆ ಸಿಬ್ಬಂದಿಗಳು ಬಂದು ಸೂಕ್ತ ವ್ಯವಸ್ಥೆ ಕಲ್ಪಿಸಿದ್ದಾರೆ. ತಾಯಿ ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ತಿಳಿದು ಬಂದಿದೆ.