ನ್ಯೂಸ್ ನಾಟೌಟ್: ಬಹುಭಾಷಾ ನಟ ಶರತ್ ಬಾಬು ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಚೆನ್ನೈನ ಆಸ್ಪತ್ರೆಗೆ ಗುರುವಾರ ದಾಖಲಾಗಿದ್ದಾರೆ.
ಸಾಕಷ್ಟು ಚಿತ್ರಗಳಲ್ಲಿ ನಟಿಸಿದ್ದ ಹಿರಿಯ ನಟ 71 ವರ್ಷ ವಯಸ್ಸಿನ ಇವರು ಇತ್ತೀಚಿಗೆ ಅನಾರೋಗ್ಯಕ್ಕೆ ತುತ್ತಾಗಿದ್ದರು.
ರಮೇಶ್ ಅರವಿಂದ್ ಅಭಿನಯದ ಅಮೃತವರ್ಷಿಣಿ, ಹೃದಯ ಹೃದಯ, ನೀಲಾ, ಬೃಂದಾವನ, ನಮ್ ಯಜಮಾನ್ರು ಸೇರಿ ಹಲವು ಹಲವು ಪ್ರಖ್ಯಾತ ಚಿತ್ರಗಳಲ್ಲಿ ನಟಿಸಿದ್ದ ಇವರು ತಮ್ಮದೇ ಆದ ನಟನೆಯಿಂದ ಪ್ರಖ್ಯಾತಿ ಪಡೆದಿದ್ದರು . ಕನ್ನಡ ಮಾತ್ರವಲ್ಲದೆ, ತೆಲುಗು ಹಾಗೂ ತಮಿಳು ಭಾಷೆಯ ಚಿತ್ರಗಳಲ್ಲೂ ನಟಿಸಿದ್ದರು.
ಪ್ರಸ್ತುತ ವೈದ್ಯರು ಅವರಿಗೆ ಚಿಕಿತ್ಸೆ ನೀಡುತ್ತಿದ್ದು, ಯಾವ ಕಾಯಿಲೆಗಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನುವ ಮಾಹಿತಿ ಇನ್ನೂ ದೊರಕಿಲ್ಲ. ಶರತ್ ಬಾಬು ಅವರನ್ನು ನೋಡಲು ಚಿತ್ರರಂಗದ ಗಣ್ಯರು ಆಸ್ಪತ್ರೆಗೆ ಭೇಟಿ ನೀಡುತ್ತಿದ್ದಾರೆ ಎಂದು ವರದಿಯಾಗಿದೆ.
1973ರಲ್ಲಿ ನಟನಾ ಕ್ಷೇತ್ರಕ್ಕೆ ಕಾಲಿಟ್ಟಿದ್ದ ಶರತ್ ಬಾಬು, ರಾಮರಾಜ್ಯಂ ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು. ಸದ್ಯ ಅವರ ಅನಾರೋಗ್ಯದ ಸುದ್ದಿ ಕೇಳಿದ ಕೂಡಲೇ ಅಭಿಮಾನಿಗಳು ಬೇಗ ಗುಣಮುಖರಾಗಿ ಎಂದು ಪ್ರಾರ್ಥಿಸುತ್ತಿದ್ದಾರೆ.