ನ್ಯೂಸ್ ನಾಟೌಟ್: ತೀವ್ರ ಜ್ವರದಿಂದ ಬಳಲುತ್ತಿದ್ದ ಬಾಲಕನೋರ್ವ ಮೃತಪಟ್ಟಿರುವ ಘಟನೆ ಕಿನ್ನಿಗೋಳಿಯ ಪಕ್ಷಿಕೆರೆ ಎಂಬಲ್ಲಿ ನಡೆದಿದೆ. ಪಕ್ಷಿಕೆರೆ ಜುಮಾ ಮಸೀದಿ ಬಳಿಯ ನಿವಾಸಿ ಇಸ್ಮಾಯೀಲ್ ಅವರ ಪುತ್ರ 10ನೇ ತರಗತಿ ವಿದ್ಯಾರ್ಥಿ ಹಿಲಾಲ್ (16) ಮೃತ ಬಾಲಕ.
ಹಿಲಾಲ್ಗೆ ಕೆಲವು ದಿನಗಳ ಹಿಂದೆ ಜ್ವರ ಕಾಣಿಸಿಕೊಂಡಿದ್ದು, ಆತನನ್ನು ಕಿನ್ನಿಗೋಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು ಎಂದು ತಿಳಿದು ಬಂದಿದೆ.