ನ್ಯೂಸ್ ನಾಟೌಟ್: ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯನ್ನು ಮದುವೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ಕಾಲೇಜಿನ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ. ಶಿಕ್ಷಕನನ್ನು ಪೋಕ್ಸೋ ಕಾಯ್ದೆ ಅಡಿಯಲ್ಲಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಆಂಧ್ರ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಖಾಸಗಿ ಕಾಲೇಜಿನಲ್ಲಿ ಉಪನ್ಯಾಸಕನಾಗಿ ಕೆಲಸ ಮಾಡುತ್ತಿದ್ದ ಆರೋಪಿಯು ಅದೇ ಕಾಲೇಜಿನ ವಿದ್ಯಾರ್ಥಿನಿಯನ್ನು ವಿವಾಹ ಆಗಿದ್ದಾನೆ ಎಂದು ತಿಳಿದು ಬಂದಿದೆ. ವಿದ್ಯಾರ್ಥಿನಿಗೆ 17 ವರ್ಷ ವಯಸ್ಸಾಗಿದ್ದು, ಆಕೆ ದ್ವಿತೀಯ ಪಿಯುಸಿನಲ್ಲಿ ಓದುತ್ತಿದ್ದಳು ಎನ್ನಲಾಗಿದೆ. ಇದೇ ಕಾಲೇಜಿನಲ್ಲಿ ಆರೋಪಿ ಕೂಡ ಕೆಲಸ ಮಾಡುತ್ತಿದ್ದ. ಅಚ್ಚರಿಯ ವಿಷಯ ಅಂದ್ರೆ ಆರೋಪಿ ಚಲಪತಿಗೆ 33 ವರ್ಷ ವಯಸ್ಸಾಗಿದ್ದು, ಆತನಿಗೆ ಈಗಾಗಲೇ ಮದುವೆಯಾಗಿ ಓರ್ವ ಮಗಳೂ ಇದ್ದಾಳೆ ಎಂದು ಪೊಲೀಸರು ಹೇಳಿದ್ದಾಳೆ.
ಕಳೆದ ಬುಧವಾರ ವಿದ್ಯಾರ್ಥಿನಿಗೆ ಅಂತಿಮ ಪರೀಕ್ಷೆ ಇದ್ದು, ಪರೀಕ್ಷೆ ಮುಗಿದ ಬಳಿಕ ಆರೋಪಿಯು ಆಕೆಗೆ ಸುಳ್ಳು ಹೇಳಿ ತಿರುಪತಿಗೆ ಕರೆದುಕೊಂಡು ಹೋಗಿದ್ದಾನೆ. ಅವರಿಬ್ಬರೂ ಅಲ್ಲಿರುವ ದೇವಸ್ಥಾನದಲ್ಲಿ ಮದುವೆಯಾಗಿದ್ದಾರೆ. ಬಳಿಕ ಆತನ ವರ್ತನೆಯಲ್ಲಿ ಬದಲಾವಣೆ ಆಗಿದ್ದನ್ನು ವಿದ್ಯಾರ್ಥಿನಿ ಗಮನಿಸಿದ್ದಾಳೆ. ಮನೆಗೆ ಬಂದ ಬಳಿಕ ವಿದ್ಯಾರ್ಥಿನಿ ಪೋಷಕರ ಬಳಿ ವಿಷಯ ತಿಳಿಸಿದ್ದು, ಬಳಿಕ ಅವರು ಗಂಗವರಂ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ. ಸದ್ಯ ಆರೋಪಿಯನ್ನು ಪೊಲೀಸರು ಫೋಕ್ಸೋ ಕಾಯ್ದೆ ಅಡಿ ಬಂಧನ ಮಾಡಿದ್ದು, ಈಗಾಗಲೇ ಆತನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.