ನ್ಯೂಸ್ ನಾಟೌಟ್ :ಇತ್ತೀಚೆಗೆ ಹಲವು ಶಾಸಕರಿಗೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯ ಅಡಿಯಲ್ಲಿ ನೋಟೀಸ್ ನೀಡಲಾಗಿತ್ತು. ಕನಕಗಿರಿ ವಿಧಾನ ಸಭಾ ಕ್ಷೇತ್ರದ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಕಾರಣ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಗಾಲಿ ಜನಾರ್ದನ ರೆಡ್ಡಿ ಸೇರಿದಂತೆ ಐದು ಜನರ ವಿರುದ್ದ ಸೋಮವಾರ ಸ್ಥಳೀಯ ಪೋಲಿಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.
ಕನಕಗಿರಿ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ಡಾ.ಚಾರುಲ್ ವೆಂಕಟರಮಣ ದಾಸರಿ ಕಳೆದ ಹಲವಾರು ದಿನಗಳಿಂದ ಸಾರ್ವಜನಿಕರಿಗಾಗಿ ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಿದ್ದರು.
ಆದರೆ ವಾಹನದ ಮೇಲೆ ಕೆಆರ್ ಪಿಪಿ ಪಕ್ಷದ ಸಂಸ್ಥಾಪಕ ಗಾಲಿ ಜನಾರ್ದನ ರೆಡ್ಡಿ, ಬಳ್ಳಾರಿ ನಗರ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ಲಕ್ಷ್ಮೀ ಅರುಣಾ , ಕನಕಗಿರಿ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ಡಾ.ಚಾರುಲ್ ವೆಂಕಟರಮಣ ದಾಸರಿ ಭಾವ ಚಿತ್ರವಿದ್ದು ನೀತಿ ಸಂಹಿತೆ ಜಾರಿಯಾದರೂ ಅನುಮತಿ ಪಡೆಯದೆ ಕ್ಷೇತ್ರದ ವಿವಿದೆಡೆ ಪ್ರಚಾರ ಮಾಡುತ್ತಿದ್ದಾರೆ ಎಂದು ಈ ಮೂವರು ಸೇರಿದಂತೆ ವಾಹನ ಮಾಲೀಕ ಜಿ.ನವೀನ್ ಕುಮಾರ್, ವಾಹನ ಚಾಲಕನ ವಿರುದ್ದ ಎಫ್ ಐ ಆರ್ ದಾಖಲಾಗಿದೆ ಎಂದು ವರದಿ ತಿಳಿಸಿದೆ.