ನ್ಯೂಸ್ ನಾಟೌಟ್: ಅಸ್ಸಾಂನ ಹಜೋ ಪಟ್ಟಣದಲ್ಲಿ ಒಂಬತ್ತು ಜನರು ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ಆಘಾತಕಾರಿ ಘಟನೆಯೊಂದು ಗುರುವಾರ ರಾತ್ರಿ ನಡೆದಿದೆ.
ಮಹಿಳೆಯ ಮನೆಯವರು ಪೊಲೀಸರಿಗೆ ದೂರು ನೀಡಿದ ನಂತರ ಸಾಮೂಹಿಕ ಅತ್ಯಾಚಾರದ ಘಟನೆ ಬೆಳಕಿಗೆ ಬಂದಿದೆ. ಆರೋಪಿಗಳು ಮಹಿಳೆಗೆ ಕೆಲಸ ಕೊಡಿಸುವುದಾಗಿ ಭರವಸೆ ನೀಡಿ ಕಾರಿನಲ್ಲಿ ಕುರಿಸಿಕೊಮಡಿದ್ದಾರೆ, ಆದರೆ ಮಹಿಳೆ ಕಾರಿನೊಳಗೆ ಪ್ರವೇಶಿಸಿದಾಗ, ಒಂಬತ್ತು ಪುರುಷರು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಸ್ಸಾಂನ ಕಮ್ರೂಪ್ ಜಿಲ್ಲೆಯ ಪೊಲೀಸ್ ಅಧೀಕ್ಷಕ ಹಿತೇಶ್ ಚಂದ್ರ ರಾಯ್, ದೂರನ್ನು ಸ್ವೀಕರಿಸಿದ ಪೊಲೀಸರು ಕ್ಷಿಪ್ರವಾಗಿ ಕ್ರಮ ಕೈಗೊಂಡಿದ್ದಾರೆ ಮತ್ತು ಪ್ರಮುಖ ಆರೋಪಿ ಕ್ಯಾಬ್ ಚಾಲಕನನ್ನು ಬಂಧಿಸಿಸಲಾಗಿದೆ ಎಂದು ತಿಳಿಸಿದ್ದಾರೆ.
ಪೊಲೀಸರು ಎಲ್ಲಾ ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡಿದ್ದು, ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದ ವಾಹನವನ್ನೂ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಸಂತ್ರಸ್ತೆ ಧೇಮಾಜಿ ಜಿಲ್ಲೆಯವರು ಎಂಬ ಮಾಹಿತಿ ದೊರಕಿದೆ.