ನ್ಯೂಸ್ ನಾಟೌಟ್ : ದಲಿತ ಮಹಿಳೆಯೊಬ್ಬಳ ಮೇಲೆ ಗುರುವಾರ ಅತ್ಯಾಚಾರ ನಡೆಸಿ ರಾಸಾಯನಿಕ ಆ್ಯಸಿಡ್ ಸುರಿದು ಬೆಂಕಿ ಹಚ್ಚಲಾಗಿದೆ, ಈ ಘಟನೆ ರಾಜಸ್ಥಾನದ ಬಾರ್ಮರ್ನ ಪಚ್ಪದ್ರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
44 ವರ್ಷದ ಮಹಿಳೆಯು ತನ್ನ ಮೇಲೆ ಆ್ಯಸಿಡ್ ಎಸೆದ ಪರಿಣಾಮ ಸುಮಾರು 50 ಪ್ರತಿಶತ ಸುಟ್ಟ ಗಾಯಗಳನ್ನು ಅನುಭವಿಸಿದಳು. ಮಹಿಳೆಯನ್ನು ಆರಂಭದಲ್ಲಿ ಚಿಕಿತ್ಸೆಗಾಗಿ ಬಲೋತ್ರದ ನಹತಾ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ನಂತರ ಆಕೆಯ ಸ್ಥಿತಿ ಹದಗೆಟ್ಟಿದ್ದರಿಂದ ಜೋಧ್ಪುರಕ್ಕೆ ಕಳುಹಿಸಲಾಯಿತು ಎಂದು ವರದಿ ತಿಳಿಸಿದೆ.
30 ವರ್ಷದ ಶಕೂರ್ ಖಾನ್ ತನ್ನ ಮನೆಗೆ ನುಗ್ಗಿ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಮಹಿಳೆ ತನ್ನ ದೂರಿನಲ್ಲಿ ತಿಳಿಸಿದ್ದಾರೆ. ಘಟನೆಯ ನಂತರ ಮಹಿಳೆ ತನ್ನ ಗುರುತು ಬಹಿರಂಗಪಡಿಸುತ್ತಾಳೆ ಎಂದು ಆರೋಪಿ ಭಾವಿಸಿ ಮಹಿಳೆಯ ಮೇಲೆ ಆ್ಯಸಿಡ್ ಎಸೆದು ಬೆಂಕಿ ಹಚ್ಚಿ ಸ್ಥಳದಿಂದ ಪರಾರಿಯಾಗಿದ್ದಾನೆ.
ಈ ಮಧ್ಯೆ ಪೊಲೀಸರು ಆರಂಭದಲ್ಲಿ ಪ್ರಕರಣ ದಾಖಲಿಸಲು ಹಿಂದೇಟು ಹಾಕಿದ್ದರು ಎಂದು ಮಹಿಳೆಯ ಸಂಬಂಧಿಕರು ಆರೋಪಿಸಿದ್ದಾರೆ. ಇದರಿಂದ ಪೊಲೀಸ್ ಠಾಣೆಯ ಹೊರಗೆ ದಲಿತ ಸಮುದಾಯದವರು ಪ್ರತಿಭಟನೆ ನಡೆಸಿದರು.
ಶುಕ್ರವಾರ, ಪೊಲೀಸರು ಭಾರತೀಯ ದಂಡ ಸಂಹಿತೆ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ ಸಂಬಂಧಿತ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿ ಶಕೂರ್ ಖಾನ್ನನ್ನು ಬಂಧಿಸಿ ಎಫ್ ಐ ಆರ್ ದಾಖಲಿಸಲಾಗಿದೆ.