ನ್ಯೂಸ್ ನಾಟೌಟ್: ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿಯ ಮೊದಲ ಪಟ್ಟಿ ಬಿಡುಗಡೆಗೆ ಕ್ಷಣಗಣನೆ ಶುರುವಾಗಿದೆ. ಕಾಂಗ್ರೆಸ್, ಬಿಜೆಪಿಗೆ ಸೆಡ್ಡು ಹೊಡೆಯಲು ಬಿಜೆಪಿಯ ತಂತ್ರ ಶುರುವಾಗಿದೆ. ಈ ಸಲುವಾಗಿ ೧೮೬ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಸಾಧ್ಯತೆ ಇದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಇಂದು ಸಂಜೆ ತಪ್ಪಿದರೆ ಮಂಗಳವಾರ ಅಥವಾ ಬುಧವಾರ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ಸ್ವತಃ ಬೊಮ್ಮಾಯಿ ತಿಳಿಸಿದ್ದಾರೆ. ಹೊಸ ಅಭ್ಯರ್ಥಿಗಳಿಗೆ ಈ ಸಲ ಮಣೆ ಹಾಕುವ ಎಲ್ಲ ಸಾಧ್ಯತೆಗಳ ಸುಳಿವನ್ನು ಬೊಮ್ಮಾಯಿ ನೀಡಿದ್ದಾರೆ. ಆದರೆ ಹೈಕಮಾಂಡ್ ತೀರ್ಮಾನ ಅಂತಿಮ ಅನ್ನುವ ಮಾತನ್ನೂ ಈ ವೇಳೆ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.