ನ್ಯೂಸ್ ನಾಟೌಟ್ : ನಿನ್ನೆ ಸಂಜೆ ವೇಳೆ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಸುಳ್ಯ ಕ್ಷೇತ್ರದಿಂದ ಸ್ಪರ್ಧಿಸಲಿರುವ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಅವರು ಭೇಟಿ ಮಾಡಿದರು.
ಈ ಸಂದರ್ಭದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಭಾಗೀರಥಿ ಅವರು, ‘ಸಾಮಾನ್ಯ ಕಾರ್ಯಕರ್ತೆ ಆಗಿರುವ ನನಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿ ಅವಕಾಶ ನೀಡಿದೆ ಎಂದು ಹರ್ಷ ವ್ಯಕ್ತಪಡಿಸಿದರು.ಪಕ್ಷದ ಹಿರಿಯರ ಮಾರ್ಗದರ್ಶನದಲ್ಲಿ ಚುನಾವಣೆ ಎದುರಿಸುತ್ತೇನೆ. ಬಿಜೆಪಿ ಸರ್ಕಾರದ ಸಚಿವರ, ಶಾಸಕರ, ಮೋದಿ ಅವರ ಅಭಿವೃದ್ಧಿ ಕೆಲಸಗಳನ್ನು ಮುಂದಿಟ್ಟು ಮತ ಕೇಳುವೆ’ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಎಸ್.ಅಂಗಾರ ರಾಜಕೀಯದಿಂದ ನಿವೃತ್ತಿ ಪಡೆದಿರುವ ಬಗ್ಗೆ ಕೇಳಿದಾಗ ‘ಅವರ ಜತೆ ಮಾತನಾಡುತ್ತೇನೆ, ಅವರ ಸಹಕಾರ ಬೇಕು ಎಂದು ಹೇಳುತ್ತಾ, ಅವರಿಗಾಗಿರುವ ಅಸಮಾಧಾನವನ್ನು ಪಕ್ಷದ ಹಿರಿಯರು ಬಗೆಹರಿಸಲಿದ್ದಾರೆ ಎಂದು ಈ ಸಂದರ್ಭದಲ್ಲಿ ಹೇಳಿದರು.