ನ್ಯೂಸ್ ನಾಟೌಟ್ : ಕಾರು ಮತ್ತು ಬಸ್ ನಡುವೆ ಕೊಡಗು ಸಂಪಾಜೆಯ ಪೆಟ್ರೋಲ್ ಪಂಪ್ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಮೃತಪಟ್ಟಿರುವ ದಾರುಣ ಘಟನೆ ಇದೀಗ ವರದಿಯಾಗಿದೆ.
ಅಪಘಾತದಲ್ಲಿ ನಾಲ್ವರಿಗೆ ಗಂಭೀರ ಗಾಯವಾಗಿದೆಯೆಂದು ಗಾಯಾಳುಗಳನ್ನು ಸುಳ್ಯದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಬ್ಬರ ಪರಿಸ್ಥಿತಿ ಚಿಂತಾಜನಕವಾಗಿದ್ದು, ಮೂವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.