27.7 C
Sullia
Sunday, March 8, 2026

ಮೊಟ್ಟೆಯಲ್ಲಿ ಕ್ಯಾನ್ಸರ್‌ ಕಾರಕ ವದಂತಿ ಬೆನ್ನಲ್ಲೇ ರಾಜ್ಯ ಸರ್ಕಾರ ಅಲರ್ಟ್‌!ಖಾಸಗಿ ಲ್ಯಾಬ್‌ನಲ್ಲಿ ಟೆಸ್ಟ್‌ಗೆ ಆದೇಶ

ನ್ಯೂಸ್ ನಾಟೌಟ್ : ಇತ್ತೀಚೆಗೆ ಸೋಷಿಯಲ್‌ ಮೀಡಿಯಾದಲ್ಲಿ ನಿರ್ದಿಷ್ಟ ಬ್ರ್ಯಾಂಡ್‌ನ ಮೊಟ್ಟೆಗಳಲ್ಲಿ ಕ್ಯಾನ್ಸರ್ ಉಂಟುಮಾಡಬಲ್ಲ ‘ಜೀನೋಟಾಕ್ಸಿಕ್’ ಕೂಡಿದೆ ಎಂಬ ವೀಡಿಯೋ ಹರಿದಾಡಿತ್ತು. ಸಹಜವಾಗಿ ಇದು ಜನರಲ್ಲಿ ಆತಂಕಕ್ಕೆ ಎಡೆಮಾಡಿಕೊಟ್ಟಿತ್ತು. ಮೊಟ್ಟೆಯಲ್ಲಿ ಕ್ಯಾನ್ಸರ್‌ ಕಾರಕ ಅಂಶಗಳಿವೆ ಎಂಬ ವದಂತಿ ವ್ಯಾಪಕವಾಗಿ ಹರಿದಾಡುತ್ತಿದ್ದಂತೆ ರಾಜ್ಯ ಸರ್ಕಾರ ಈಗ ಅಲರ್ಟ್‌ ಆಗಿದೆ. ಖಾಸಗಿ ಲ್ಯಾಬ್‌ಗಳಲ್ಲಿ ಮೊಟ್ಟೆ ಪರೀಕ್ಷಿಸಲು ಆದೇಶಿಸಿದೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಈ ಬಗ್ಗೆ ಮಾಧ್ಯಮವೊಂದು ವರದಿ ಮಾಡಿದ್ದು,ಖಾಸಗಿ ಲ್ಯಾಬ್‌ನಲ್ಲಿ ಸರ್ಕಾರ ಟೆಸ್ಟ್‌ಗೆ ಸೂಚಿಸಿದೆ. ಒಂದು ವಾರದಲ್ಲಿ ವರದಿ ನೀಡಲು ಆದೇಶಿಸಿದೆ ಎಂದು ಹೇಳಲಾಗಿದೆ. ಸರ್ಕಾರಿ ಲ್ಯಾಬ್‌ನಲ್ಲಿ ಹೆಚ್ಚಿನ ತಂತ್ರಜ್ಞಾನ ವ್ಯವಸ್ಥೆ ಇಲ್ಲದ ಕಾರಣ ಖಾಸಗಿ ಲ್ಯಾಬ್ ನಲ್ಲಿ ಟೆಸ್ಟ್ ಮಾಡಲು ಆದೇಶಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಏನಿದು ಆತಂಕ?
ಇತ್ತೀಚೆಗೆ ಸಾಮಾಜಿಕ ಮಾಧ್ಯಮದಲ್ಲಿ ನಿರ್ದಿಷ್ಟ ಬ್ರಾಂಡ್‌ನ ಮೊಟ್ಟೆಗಳಲ್ಲಿ ಕ್ಯಾನ್ಸರ್ ಉಂಟುಮಾಡಬಲ್ಲ ‘ಜೀನೋಟಾಕ್ಸಿಕ್’ ಕೂಡಿದೆ ಎಂಬ ವೀಡಿಯೋ ಹರಿದಾಡುತ್ತಿತ್ತು. ಸಹಜವಾಗಿ ಇದು ಜನರಲ್ಲಿ ಆತಂಕಕ್ಕೆ ಎಡೆಮಾಡಿಕೊಟ್ಟಿತ್ತು. ಮೊಟ್ಟೆಗಳಲ್ಲಿ ನಿಷೇಧಿತ ಕ್ಯಾನ್ಸರ್‌ಕಾರಕ ಅಂಶವಿದೆ ಎಂಬ ವದಂತಿಗಳು ಹಬ್ಬಿರುವ ಪರಿಣಾಮವಾಗಿ ಶಾಲಾ ಮಕ್ಕಳಿಗೆ ಕೊಡಲು ಹಿಂದೇಟು ಹಾಕುವ ಪರಿಸ್ಥಿತಿ ನಿರ್ಮಾಣ ಆಗಿತ್ತು. ಈ ಬೆನ್ನಲ್ಲೇ ಆರೋಗ್ಯ ಸಚಿವರು ಆತಂಕ ಪಡಬೇಕಿಲ್ಲ ಎಂದು ನೀಡಿದ್ದರು. ಕಳೆದ ವರ್ಷ 147 ಮಾದರಿ ಪರೀಕ್ಷೆ ಮಾಡಲಾಗಿತ್ತು. ಅದರಲ್ಲಿ ಒಂದು ಫೇಲ್ ಆಗಿತ್ತು, ಬೇರೆ ಎಲ್ಲಾ ಸ್ಯಾಂಪಲ್ ಉತ್ತಮವಾಗಿತ್ತು. ಯಾವುದೇ ಆತಂಕ ಬೇಡ ಅಂತ ಹೇಳಿದ್ದರು.

Related Articles

LEAVE A REPLY

Please enter your comment!
Please enter your name here

Latest Articles