ಸುಳ್ಯ : 6 ತಿಂಗಳಿಂದ ಸಂಬಳ ಕೊಡದ ಸರ್ಕಾರ: ರಾಜೀನಾಮೆ ಕೊಟ್ಟ ವೈದ್ಯ

ನ್ಯೂಸ್ ನಾಟೌಟ್ : ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡಿದ್ದ ಸುಳ್ಯದ ಕೊಲ್ಲಮೊಗ್ರು ಪ್ರಾಥಮಿಕ ಕೇಂದ್ರದ ವೈದ್ಯಾಧಿಕಾರಿಗಳು (Doctor) ಸರಿಯಾಗಿ ಸಂಬಳ ಆಗದ ಕಾರಣ ರಾಜಿನಾಮೆ ನೀಡಿದ್ದಾರೆ. 6 ತಿಂಗಳಿಂದ ಸಂಬಳ ಬರದಿದ್ದಕ್ಕೆ ಬೇಸತ್ತು ಅವರು ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ವೈದ್ಯರಾದ ಡಾ.ಕುಲದೀಪ್ ಎಂ.ಡಿ ರಾ ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಳೆದ ಎರಡೂವರೆ ವರ್ಷದಿಂದ ವೈದ್ಯಾಧಿಕಾರಿಗಳಾಗಿ ಕೆಲಸ ಮಾಡುತ್ತಿದ್ದರು. ಸಂಬಳ ಬಾರದೇ ವೈಯಕ್ತಿಕ ಜೀವನಕ್ಕೆ ಸಮಸ್ಯೆ ಆಗುತ್ತಿದೆ. ಆರ್ಥಿಕ ಸಮಸ್ಯೆ ಉಂಟಾಗುತ್ತಿದೆ ಈ ಹಿನ್ನೆಲೆಯಲ್ಲಿ ಅವರು ರಾಜೀನಾಮೆ ಸಲ್ಲಿಸಿದ್ದಾರೆ. ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣಾಧಿಕಾರಿಳಿಗೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.

ರಾಜ್ಯದ ಹಲವು ಪ್ರಾಥಮಿಕ ಗುತ್ತಿಗೆ ವೈದ್ಯಾಧಿಕಾರಿಗಳಿಗೆ ಸರ್ಕಾರ ಸಂಬಳ ಬಾಕಿ ಉಳಿಸಿಕೊಂಡಿದೆ. ಇನ್ನೂ ನೌಕರರ ಸಂಬಳದ ವಿಳಂಬದ ಬಗ್ಗೆ ವಿಪಕ್ಷಗಳು ಸರ್ಕಾರವನ್ನು ಎಚ್ಚರಿಸುತ್ತಿವೆ

Related Articles

LEAVE A REPLY

Please enter your comment!
Please enter your name here

Latest Articles